ಇದಕ್ಕೂ ಮೊದಲು ಮುಂದಿನ ಆರ್ಥಿಕ ವರ್ಷದ ವಿವಿಧ ಇಲಾಖೆಗಳ ವಾರ್ಷಿಕ ಅಭಿವೃದ್ಧಿ ಕ್ರಿಯಾಯೋಜನೆ ಸಂಬAಧ ಸುದೀರ್ಘ ಚರ್ಚೆ ನಡೆಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಸಚಿವ ಎನ್.ಎಸ್. ಬೋಸರಾಜು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನೇಕ ಬಾರಿ ಚರ್ಚಿಸಿದ ನಂತರ ಜಿಲ್ಲಾ ಯೋಜನಾ ಸಮಿತಿ ಸಭೆಯನ್ನು ನಡೆಸಿ ಸಲಹಾ ಸಮಿತಿಯಿಂದ ಸಲಹೆ ಮತ್ತು ಮಾರ್ಗದರ್ಶನ ಪಡೆಯುವಂತೆ ನಿರ್ದೇಶನ ನೀಡಿದ್ದಾರೆ. ಅದರಂತೆ ಕೊಡಗು ಜಿಲ್ಲೆಯಲ್ಲಿ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಶಾಲಾ ಕಾಲೇಜು ಕಟ್ಟಡ, ಸರ್ಕಾರಿ ಕಚೇರಿ ಕಟ್ಟಡಗಳ ಅಭಿವೃದ್ಧಿ ಹಾಗೂ ಅಗತ್ಯವಿರುವ ಕಡೆ ಸಾರ್ವಜನಿಕ ಆಸ್ಪತ್ರೆ ಹಾಗೂ ಪಶು ಆಸ್ಪತ್ರೆ ನಿರ್ಮಾಣ, ಸಾರಿಗೆ ಸಂಪರ್ಕ, ವಿದ್ಯಾರ್ಥಿ ನಿಲಯಗಳ ಆರಂಭ, ವಸತಿ ಯೋಜನೆ, ಹೀಗೆ ಹಲವು ಅಭಿವೃದ್ಧಿ ಕೆಲಸಗಳ ಸಂಬAಧ ಕ್ರೀಯಾಯೋಜನೆ ತಯಾರಿಸಿ ನಿಖರ ಮಾಹಿತಿ ಒದಗಿಸಬೇಕು.