ಕಾವಲುಗಾರರ ನಿಯೋಜನೆಗೆ ಕ್ರಮ

ಸ್ವಚ್ಛ ಕುಶಾಲನಗರ ಮತ್ತು ಸ್ವಚ್ಛ ಕಾವೇರಿ ಯೋಜನೆ ಕುರಿತು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ನೇತೃತ್ವದಲ್ಲಿ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಟಿ.ಎಸ್.ಗಿರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು. ಎಂ.ಎನ್. ಚಂದ್ರಮೋಹನ್, ವನಿತಾ ಚಂದ್ರಮೋಹನ್, ಎಂ. ಕೃಷ್ಣ, ಕೊಡಗನ ಹರ್ಷ, ವೈಶಾಖ್ ಇದ್ದರು.
ಸ್ವಚ್ಛ ಕುಶಾಲನಗರ ಮತ್ತು ಸ್ವಚ್ಛ ಕಾವೇರಿ ಯೋಜನೆ ಕುರಿತು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ನೇತೃತ್ವದಲ್ಲಿ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಟಿ.ಎಸ್.ಗಿರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು. ಎಂ.ಎನ್. ಚಂದ್ರಮೋಹನ್, ವನಿತಾ ಚಂದ್ರಮೋಹನ್, ಎಂ. ಕೃಷ್ಣ, ಕೊಡಗನ ಹರ್ಷ, ವೈಶಾಖ್ ಇದ್ದರು.
Published on
ಕುಶಾಲನಗರ: ಪಟ್ಟಣದ ಸ್ವಚ್ಛತೆ ಮತ್ತು ಕಾವೇರಿ ನದಿ ಸಂರಕ್ಷಣೆಗಾಗಿ ಕುಶಾಲನಗರ ಪುರಸಭೆ ಮೂಲಕ ವಿಶೇಷ ಕಾವಲುಗಾರರ ನಿಯೋಜನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಟಿ.ಜೆ.ಗಿರೀಶ್ ತಿಳಿಸಿದರು.
ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ನೇತೃತ್ವದಲ್ಲಿ ಕುಶಾಲನಗರ ಸಂಘ ಸಂಸ್ಥೆಗಳ ಪ್ರಮುಖರೊಂದಿಗೆ ಶುಕ್ರವಾರ ಸ್ವಚ್ಛ ಕುಶಾಲನಗರ ಸ್ವಚ್ಛ ಕಾವೇರಿ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ಕುಶಾಲನಗರ ವ್ಯಾಪ್ತಿಯ ಕಾವೇರಿ ನದಿಯಲ್ಲಿ ವಲಸೆ ಕಾರ್ಮಿಕರು ಮತ್ತು ಕೆಲ ಪ್ರವಾಸಿಗರು ಬಯಲು ಶೌಚ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಮುಖ್ಯಾಧಿಕಾರಿ ಈ ಸಂಬಂಧ ಜನರಲ್ಲಿ ಜಾಗೃತಿ ಮೂಡಿಸಲು ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗುವುದು. ಕನ್ನಡ ಸೇರಿದಂತೆ ಇತರ ಭಾಷೆಗಳಲ್ಲಿ ಕಸ ವಿಲೇವಾರಿ ವಾಹನಗಳ ಮೂಲಕ ನಿತ್ಯ ಅರಿವು ಮೂಡಿಸಲಾಗುವುದು. ತಪ್ಪಿದ್ದಲ್ಲಿ ಪುರಸಭೆ ಮೂಲಕ ದಂಡ ವಿಧಿಸುವ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದರು.
ನದಿಗೆ ತೆರಳುವ ಮಾರ್ಗಗಳಲ್ಲಿ ಜಾಗೃತಿ ಮೂಡಿಸುವ ಫಲಕಗಳನ್ನು ಅಳವಡಿಸಲಾಗುವುದು. ಆಯಕಟ್ಟಿನ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು. ಕುಶಾಲನಗರ-ಮಡಿಕೇರಿ ರಸ್ತೆಯ ಅಂಚಿನಲ್ಲಿರುವ ಐತಿಹಾಸಿಕ ತಾವರೆಕೆರೆ ಅಭಿವೃದ್ಧಿ ಕಾಮಗಾರಿ ಸದ್ಯದಲ್ಲಿಯೇ ಆರಂಭವಾಗಲಿದೆ. ಕುಶಾಲನಗರದಲ್ಲಿ ನಡೆಯುತ್ತಿರುವ ಪಟ್ಟಣದ ಒಳಚರಂಡಿ ಕಾಮಗಾರಿ ವಿಳಂಬ ಸಂಬಂಧ ಒಳಚರಂಡಿ ಮಂಡಳಿ ಅಧಿಕಾರಿಗಳೊಂದಿಗೆ ಸಂಪರ್ಕಿಸಿ ಮಾಹಿತಿ ಪಡೆದರು. ಜೂನ್ ಅಂತ್ಯದೊಳಗೆ ಕುಶಾಲನಗರ ಪಟ್ಟಣದ ಒಳಚರಂಡಿ ಯೋಜನೆ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನು ಒಳಚರಂಡಿ ಯೋಜನೆಯ ಅಧಿಕಾರಿ ನೀಡಿರುವುದಾಗಿ ತಿಳಿಸಿದರು.
ಜೂನ್ ಅಂತ್ಯದೊಳಗೆ ಕುಶಾಲನಗರ ಪಟ್ಟಣದ ಒಳಚರಂಡಿ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಲೋಕಾಯುಕ್ತ ಮತ್ತು ಹೈಕೋರ್ಟ್ ಮೊರೆ ಹೋಗುವುದಾಗಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಪ್ರಮುಖರು ಮುಖ್ಯಾಧಿಕಾರಿಗೆ ಎಚ್ಚರಿಸಿದರು. ನಂತರ ಮನವಿ ಪತ್ರ ಸಲ್ಲಿಸಿದರು.
ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್.ಚಂದ್ರಮೋಹನ್, ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಡೆಪಂಡ ಬೋಸ್ ಮೊಣ್ಣಪ್ಪ, ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಡಿ.ಆರ್.ಶಿವಶಂಕರ್, ಬಿ.ಸಿ.ಶಿವರಾಜ್, ವಾಸವಿ ಯುವಜನ ಸಂಘದ ಉಪಾಧ್ಯಕ್ಷ ವೈಶಾಕ್, ಗೌಡ ಸಮಾಜ ಉಪಾಧ್ಯಕ್ಷ ಕೊಡಗನ ಹರ್ಷ, ಚೇಂಬರ್ ಆಫ್ ಕಾಮರ್ಸ್ ಮಾಜಿ ಅಧ್ಯಕ್ಷ ಅಮೃತರಾಜ್, ಮಾಜಿ ಸೈನಿಕ ಅಮೆ ಜನಾರ್ದನ, ಕರುಂಬಯ್ಯ, ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷ ಎಂ. ಕೃಷ್ಣ, ಪುರಸಭೆ ಆರೋಗ್ಯ ಅಧಿಕಾರಿ ಉದಯಕುಮಾರ್, ಕಂದಾಯ ಅಧಿಕಾರಿ ರಾಮು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net