ಬಸವಾದಿ ಶರಣರ ಜೀವನ, ತತ್ವಾದರ್ಶ ಅಳವಡಿಸಿಕೊಳ್ಳಿ

ಸೋಮವಾರಪೇಟೆ ಸಮೀಪದ ಗೌಡಳ್ಳಿಯಲ್ಲಿ ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ವಿವಿಧ ಘಟಕಗಳಿಂದ ನಡೆದ ಧಾರ್ಮಿಕ ಸಭೆಯನ್ನು ಶಾಸಕ ಡಾ.ಮಂತರ್‌ಗೌಡ ಉದ್ಘಾಟಿಸಿದರು. ಶಿವಪ್ಪ, ಶ್ರೀ ಸದಾಶಿವ ಸ್ವಾಮೀಜಿ, ಮುಕ್ತಾಂಬಾ, ಸಚ್ಚಿದಾನಂದ ಇದ್ದರು.
ಸೋಮವಾರಪೇಟೆ ಸಮೀಪದ ಗೌಡಳ್ಳಿಯಲ್ಲಿ ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ವಿವಿಧ ಘಟಕಗಳಿಂದ ನಡೆದ ಧಾರ್ಮಿಕ ಸಭೆಯನ್ನು ಶಾಸಕ ಡಾ.ಮಂತರ್‌ಗೌಡ ಉದ್ಘಾಟಿಸಿದರು. ಶಿವಪ್ಪ, ಶ್ರೀ ಸದಾಶಿವ ಸ್ವಾಮೀಜಿ, ಮುಕ್ತಾಂಬಾ, ಸಚ್ಚಿದಾನಂದ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಮಂತರ್‌ಗೌಡ ಸಲಹೆ
  • ಬಸವ ಜಯಂತಿ, ಹಾನಗಲ್ ಕುಮಾರಸ್ವಾಮಿ ಜಯಂತಿ, ಡಾ. ಶಿವಕುಮಾರ ಸ್ವಾಮೀಜಿ ಹಾಗೂ ರೇಣುಕಾಚಾರ್ಯ ಜಯಂತಿ
ಸೋಮವಾರಪೇಟೆ : ಬಸವಣ್ಣನ ಅನುಯಾಯಿಗಳಾದ ನಾವು ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಇತರರಿಗೆ ಮಾದರಿಯಾಗಿ ಬದುಕಬೇಕು ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಿಸಿದರು.
ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ, ಸೋಮವಾರಪೇಟೆ ತಾಲೂಕು ಮತ್ತು ಯುವ ಘಟಕದ ವತಿಯಿಂದ ತಾಲೂಕಿನ ಗೌಡಳ್ಳಿ ಬಿ.ಜಿ.ಎಸ್.ವಿದ್ಯಾಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಬಸವ ಜಯಂತಿ, ಹಾನಗಲ್ ಕುಮಾರಸ್ವಾಮಿ ಜಯಂತಿ, ಡಾ. ಶಿವಕುಮಾರ ಸ್ವಾಮೀಜಿ ಹಾಗೂ ರೇಣುಕಾಚಾರ್ಯ ಜಯಂತಿ ಅಂಗವಾಗಿ ಧಾರ್ಮಿಕ ಸಭೆ, ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಸಹಕಾರಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು.
ಸಮಾಜಮುಖಿ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಕಲುಷಿತಗೊಳ್ಳುತ್ತಿರುವ ಸಾಮಾಜಿಕ ಬದುಕನ್ನು ಉತ್ತಮ ಪಡಿಸಿಕೊಳ್ಳಲು ಪ್ರತಿಯೊಬ್ಬರೂ ಬಸವಾದಿ ಶರಣರ ಜೀವನ ಮತ್ತು ಆದರ್ಶ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ನಮ್ಮ ನಾಡಿನಲ್ಲಿ ಮಠ-ಮಾನ್ಯಗಳು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ನೀಡುತ್ತಿರುವ ಸೇವೆ ಅನನ್ಯವಾದದ್ದು. ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದರು.
ಕುಶಾಲನಗರದಲ್ಲಿ ನಿರ್ಮಿಸುವ ಬಸವ ಭವನ ಕಟ್ಟಡ ನಿರ್ಮಾಣಕ್ಕೆ ಶಾಸಕರ ಅನುದಾನದಲ್ಲಿ 10 ಲಕ್ಷ ರೂ. ನೀಡುವ ಭರವಸೆ ನೀಡಿದರು.
ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಶಿಸ್ತು ಸಂಯಮ, ಉತ್ತಮ ನಾಯಕತ್ವ ಗುಣ, ಪರಸ್ಪರ ಪ್ರೀತಿ ವಿಶ್ವಾಸದಿಂದ ನಡೆದುಕೊಂಡರೆ ಕ್ರೀಡೆಯಲ್ಲಿ ದೊಡ್ಡ ಸಾಧನೆ ಮಾಡಬಹುದು ಎಂದು ಕ್ರೀಡಾಪಟುಗಳಿಗೆ ಸ್ಪೂರ್ತಿ ತುಂಬಿದರು.
ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಸಮಾನತೆ ಸಾರಿದ ಶರಣರ ಚಿಂತನೆಗಳಿಗೆ ಸಮನಾದ ಶಕ್ತಿ ಇಲ್ಲ. ಎಲ್ಲ ಕಾಲಕ್ಕೂ ಶರಣರ ಚಿಂತನೆಗಳು ಅನ್ವಯವಾಗುವುದು ಶರಣ ತತ್ವಗಳ ಚಿಂತನೆಯ ವಿಶೇಷತೆ ಎಂದು ಹೇಳಿದರು.
ಸೋಮವಾರಪೇಟೆ ಸಮೀಪದ ಗೌಡಳ್ಳಿಯಲ್ಲಿ ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ವಿವಿಧ ಘಟಕಗಳಿಂದ ನಡೆದ ಕ್ರೀಡಾಕೂಟದಲ್ಲಿ ಮಹಿಳೆಯರ ಹಗ್ಗಜಗ್ಗಾಟದ ರೋಚಕ ಕ್ಷಣ.
ರಾಜ್ಯ ಹೈಕೋರ್ಟ್ ಹಿರಿಯ ವಕೀಲ ಎಚ್.ಎಸ್. ಚಂದ್ರಮೌಳಿ ಅವರು ಸಾಹಿತಿ ಪ್ರಭಾಕರ್ ಶಿಶಿಲ ಅವರು ದೊಡ್ಡರಾಜೇಂದ್ರ ಅವರ ಕುರಿತು ಬರೆದ ಪುಸ್ತಕವನ್ನು ಬಿಡುಗಡೆ ಗೊಳಿಸಿದರು. ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕಲ್ಲಹಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ವಿ.ಶಿವಪ್ಪ, ಮಹಾಸಭಾದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಮುಕ್ತಾಂಬಾ, ಮಹಾಸಭಾದ ಕೇಂದ್ರ ಸಮಿತಿಯ ಉಪಾಧ್ಯಕ್ಷ ಸಚ್ಚಿದಾನಂದ ಮೂರ್ತಿ, ಮಹಾಸಭಾದ ವಾಣಿಜ್ಯ ಮತ್ತು ಕೈಗಾರಿಕಾ ಘಟಕದ ಅಧ್ಯಕ್ಷ ವಿಜಯಕುಮಾರ್ ಪಾಟೀಲ್ ಮತ್ತಿತರ ಗಣ್ಯರು ಇದ್ದರು.
ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡಾಕೂಟಗಳಲ್ಲಿ ವಿಜೇತರಾದವರಿಗೆ ಮಹಾಸಭಾದ ವತಿಯಿಂದ ಟ್ರೋಫಿ ಮತ್ತು ಬಹುಮಾನಗಳನ್ನು ವಿತರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net