ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆ

ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ 11 ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ವಹಿಸಿದ್ದರು.
ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ 11 ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ವಹಿಸಿದ್ದರು.
Published on
ಮಡಿಕೇರಿ:
ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ 11 ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ 2024-25ನೇ ಸಾಲಿನ ಬೇಸಿಗೆ ಋತುವಿನ ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಬೆಳೆ ಸಮೀಕ್ಷೆ ಪರಿಶೀಲನೆ ಸಂಬAಧಿಸಿದAತೆ ಮಾಹಿತಿ ನೀಡುವುದು, 11ನೇ ಕೃಷಿ ಗಣತಿಯ ಮೂರನೇ ಹಂತದ ಬಗ್ಗೆ ಮಾಹಿತಿ ಒದಗಿಸುವುದು, ಹಾಗೆಯೇ ಪ್ರಸಕ್ತ ಸಾಲಿನ ಬೆಳೆ ಕಟಾವು ಸಂಬAಧಿಸಿದAತೆ ನಿಖರ ಮಾಹಿತಿ ಒದಗಿಸುವಂತೆ ಸೂಚಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಡಿ. ನಾರಾಯಣ 2024-25ನೇ ಸಾಲಿನ ಬೇಸಿಗೆ ಋತುವಿನ ಸಿಎಸ್‌ಎಸ್‌ಟಿ ವರದಿಯಂತೆ ಗ್ರಾಮಾವಾರು, ಹೋಬಳಿವಾರು ಪರಿಶೀಲಿಸಿ ವೆಬ್ ತಂತ್ರಾAಶದಲ್ಲಿ ಮರು ಹೊಂದಾಣಿಕೆ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ.
ತಾಲೂಕು ಮಟ್ಟದ ಕೃಷಿ ಅಧಿಕಾರಿಗಳಿಂದ ದೃಢೀಕರಿಸಿ ಮರು ಹೊಂದಾಣಿಕೆ ಆಧಾರದ ಮೇಲೆ ಜಿಲ್ಲಾ ವರದಿಯನ್ನು ತಯಾರಿಸಿ ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ. 2025-26ನೇ ಸಾಲಿನ ಮುಂಗಾರು ಋತುವಿನ ಬೆಳೆ ಸಮೀಕ್ಷೆ ಯೋಜನೆಯಡಿ ಜಿಲ್ಲೆಗೆ ಹಂಚಿಕೆಯಡಿ 525 ಗ್ರಾಮಗಳ ಪೈಕಿ 102 ಗ್ರಾಮಗಳಲ್ಲಿ ಸಕಾಲಿಕ ಯೋಜನೆಯಡಿ ಶೇ.1 ರಷ್ಟು ಮುಂಗಾರು ಬೆಳೆ ಸಮೀಕ್ಷೆ ಹಂಚಿಕೆಯಾಗಿದ್ದು, ಸಮೀಕ್ಷೆಯನ್ನು ಸಾಂಖ್ಯಿಕ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನ ಹಿಂಗಾರು ಋತುವಿನ ಬೆಳೆ ಸಮೀಕ್ಷೆಯ ತರಬೇತಿ ಕಾರ್ಯ ಪೂರ್ಣಗೊಂಡಿದ್ದು, ಕ್ಷೇತ್ರ ಕಾರ್ಯ ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು. 11ನೇ ಕೃಷಿ ಗಣತಿಯ ಮೂರನೇ ಹಂತದ ಕ್ಷೇತ್ರ ಕಾರ್ಯಕ್ಕೆ ಜಿಲ್ಲೆಯ 26 ಗ್ರಾಮಗಳು ಆಯ್ಕೆಯಾಗಿದ್ದು, ಎಲ್ಲಾ 26 ಗ್ರಾಮಗಳ ಕ್ಷೇತ್ರ ಕಾರ್ಯ ಪೂರ್ಣಗೊಂಡಿದೆ. ಈ 26 ಗ್ರಾಮಗಳ ಕ್ರೋಢೀಕೃತ ವರದಿಯನ್ನು ಗಮನಿಸಿದಾಗ 558 ಹಿಡುವಳಿದಾರರು ಇದ್ದು, 2794 ಹೆಕ್ಟೇರ್ ಹಿಡುವಳಿ ಪ್ರದೇಶ ಹೊಂದಿದೆ ಎನ್ನುವುದು ಗೊತ್ತಾಗಿದೆ. ಜಿಲ್ಲೆಯಲ್ಲಿ ಪಿಎಂ.ಕಿಸಾನ್ ಯೋಜನೆಯಡಿ 299 ರೈತರು ಉಪಯೋಗ ಪಡೆದಿದ್ದಾರೆ. 169 ರೈತರು ಮಣ್ಣಿನ ಆರೋಗ್ಯ ಕಾರ್ಡ್ ಪಡೆದಿದ್ದಾರೆ. ಹಾಗೆಯೇ 349 ಮಂದಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ್ದಾರೆ. 2025-26ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ, ಪ್ರಧಾನಮಂತ್ರಿ ಫಸಲ್ ಬಿಮಾ (ವಿಮೆ) ಯೋಜನೆಯಡಿ 476 ಬೆಳೆ ಕಟಾವು ಪ್ರಯೋಗಗಳ ಹಂಚಿಕೆಯಾಗಿದ್ದು, ಇವುಗಳ ಪೈಕಿ ಭತ್ತ(ಮಳೆಯಾಶ್ರಿತ) 336, ಭತ್ತ(ನೀರಾವರಿ) 20, ಮುಸುಕಿನ ಜೋಳ(ಮಳೆಯಾಶ್ರಿತ) 30 ಪ್ರಯೋಗಗಳ ಹಂಚಿಕೆಯಾಗಿದೆ. ಇಳುವರಿಗೆ ಒಳಪಡದ ಬೆಳೆಗಳಲ್ಲಿ ಶುಂಠಿ(ಮಳೆಯಾಶ್ರಿತ) 60 ಪ್ರಯೋಗಗಳು, ಸಿಹಿಗೆಣಸು(ಮಳೆಯಾಶ್ರಿತ) 30 ಪ್ರಯೋಗಗಳು, ಇವುಗಳ ಪೈಕಿ 250 ಪ್ರಯೋಗಗಳು ಪೂರ್ಣಗೊಂಡಿದ್ದು, ಉಳಿದ 226 ಪ್ರಯೋಗಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕೃಷಿ ಇಲಾಖೆ ಜಂಟಿ ನಿರ್ದೇಶಕÀ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮುತ್ತಪ್ಪ, ಸಹಾಯಕ ಸಾಂಖ್ಯಿಕ ಅಧಿಕಾರಿಗಳಾದ ವೆಂಕಟೇಶ್, ಬಿ.ಎಂ.ಗಾನವಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net