ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಶಿಕ್ಷಣಕ್ಕೆ ಅವಕಾಶ ನೀಡಲಿ

ಸೋಮವಾರಪೇಟೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಮಹಾಮಂಡಲದ  ವಾರ್ಷಿಕ ಮಹಾಸಭೆ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಧನಲಕ್ಷ್ಮೀ, ಜಯಾ, ತಾರಾ ಇದ್ದರು.
ಸೋಮವಾರಪೇಟೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಮಹಾಮಂಡಲದ ವಾರ್ಷಿಕ ಮಹಾಸಭೆ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಧನಲಕ್ಷ್ಮೀ, ಜಯಾ, ತಾರಾ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀದೇವಿ ಬಿ.ಮುದೋಳ ಸಲಹೆ
  • ಮಹಿಳಾ ದಿನಾಚರಣೆ ಕಾರ್ಯಕ್ರಮ
ಸೋಮವಾರಪೇಟೆ: ಸರ್ಕಾರಿ ಕೆಲಸ ಮಾಡುವ ಸಂದರ್ಭ ಎಲ್ಲರೂ ಒಗ್ಗಟ್ಟಾಗಿ ಹೋರಾಡಿದರೆ ಮಾತ್ರ ಸವಲತ್ತುಗಳನ್ನು ಪಡೆಯಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀದೇವಿ ಬಿ.ಮುದೋಳ ಹೇಳಿದರು.
ಇಲ್ಲಿನ ತಾಲೂಕು ಸ್ತ್ರೀಶಕ್ತಿ ಭವನದಲ್ಲಿ ಶನಿವಾರ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಮಹಾಮಂಡಲದ ಟಿಯುಸಿಸಿ ಸಂಘಟನೆಯ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಲ್ಲೆಡೆ ಅಂಗನವಾಡಿಗಳು ಎಲ್ಲ ಗ್ರಾಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಮುಖ ಕೇಂದ್ರಗಳಾಗಿವೆ. ಇತ್ತೀಚಿನ ದಿನಗಳಲ್ಲಿ ಕೆಲವು ಅಂಗನವಾಡಿ ಕೇಂದ್ರಗಳು ಮಕ್ಕಳ ಕೊರತೆಯನ್ನು ಎದುರಿಸುತ್ತಿವೆ. ಅದಕ್ಕಾಗಿ ಚಿಕ್ಕ ಮಕ್ಕಳನ್ನು ತಿದ್ದಿ ತೀಡುವ ಕೆಲಸ ಮಾಡುತ್ತಿರುವ ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿವರೆಗಿನ ಶಿಕ್ಷಣಕ್ಕೆ ಅವಕಾಶ ಮಾಡಿಕೊಡಬೇಕು. ಇದರೊಂದಿಗೆ ತರಗತಿ ನಡೆಸಲು ಎಲ್ಲ ರೀತಿಯ ಸವಲತ್ತುಗಳನ್ನು ಸರ್ಕಾರ ನೀಡಬೇಕೆಂದು ಒತ್ತಾಯಿಸಿದರು.
ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಶಾರದಾ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಊರಿನ ತಾಯಿಯಾಗಿ ಕೆಲಸ ಮಾಡಬೇಕು. ನಮ್ಮ ಅವಧಿಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಸ್ವಂತ ಮನೆಗಳಂತೆ ನಿರ್ವಹಿಸುತ್ತಿದ್ದೇವು. ಗರ್ಭಿಣಿ, ಬಾಣಂತಿಯರು, ಮಕ್ಕಳು ಸೇರಿದಂತೆ ಎಲ್ಲರ ಸೇವೆಯನ್ನು ಮಾಡಲಾಗುತ್ತಿದೆ. ಯಾವುದೇ ಅಂಗನವಾಡಿ ಕಾರ್ಯಕರ್ತೆಯರು ಪ್ರಾಮಾಣಿಕವಾಗಿ ಕೆಲಸ ಮಾಡಿದಲ್ಲಿ ಮೇಲಧಿಕಾರಿಗಳಿಗೆ ಹೆದರುವ ಅವಶ್ಯಕತೆ ಇರುವುದಿಲ್ಲ. ಹಿಂದೆ ಬಹಳ ಕಡಿಮೆ ಸಂಖ್ಯೆಯಲ್ಲಿದ್ದ ಅಂಗನವಾಡಿ ಕೇಂದ್ರಗಳು ದಿನಕಳೆದಂತೆ ಎಲ್ಲೆಡೆ ಹೆಚ್ಜಾಗಿವೆ. ಊರಿನವರೊಂದಿಗೆ ಹೊಂದಾಣಿಕೆಯಿಂದ ನಮ್ಮ ಕೇಂದ್ರದ ಸುತ್ತಲಿನ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಕೆಲಸ ಮಾಡಿದಲ್ಲಿ ಮಾತ್ರ ನಮ್ಮ ಕೆಲಸದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀದೇವಿ ಬಿ. ಮುದೋಳ, ಮೇಲ್ವಿಚಾರಕಿ ಸಾವಿತ್ರವ್ವ, ನಿವೃತ್ತ ಅಂಗನವಾಡಿ ಶಿಕ್ಷಕಿ ಕೆ.ಕೆ. ಶಾರದಾ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಟಿಯುಸಿಸಿ ತಾಲೂಕು ಘಟಕದ ಅಧ್ಯಕ್ಷೆ ಧನಲಕ್ಷ್ಮೀ ವಹಿಸಿದ್ದರು. ಟಿಯುಸಿಸಿ ಉಪಾಧ್ಯಕ್ಷೆ ಜಯಾ, ಪ್ರಧಾನ ಕಾರ್ಯದರ್ಶಿ ತಾರಾ ಲೋಬೋ. ಖಜಾಂಚಿ ಗೀತಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net