ಹಳೇ ವಿದ್ಯಾರ್ಥಿಗಳ ಪರವಾಗಿ ಮಾತನಾಡಿದ ಸುನಿಲ್ ಕರಳೆ, ಶಾಲೆಗೆ ದಕ್ಷಿಣಾಮೂರ್ತಿ ಮತ್ತು ಮಲ್ಲಿಕಾರ್ಜುನ್ ನೀಡಿದ ಕೊಡುಗೆಗಳಿಗಾಗಿ ಕೃತಜ್ಞತೆ ಸಲ್ಲಿಸಿದರು. ಹಳೇ ವಿದ್ಯಾರ್ಥಿಗಳು ಮತ್ತು ಶಾಲಾ ತಂಡಗಳ ನಡುವೆ ನಡೆದ ಸೌಹಾರ್ದ ಫುಟ್‌ಬಾಲ್ ಮತ್ತು ಹಾಕಿ ಪಂದ್ಯ ಗಮನ ಸೆಳೆಯಿತು. ಉಪ ಪ್ರಾಂಶುಪಾಲ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ, ಹಿರಿಯ ಶಿಕ್ಷಕ ಎನ್. ವಿಬಿನ್ ಕುಮಾರ್, ಬೋಧಕ ಮತ್ತು ಆಡಳಿತ ಸಿಬ್ಬಂದಿ, ಎನ್‌ಸಿಸಿ ಪಿಐ ಸಿಬ್ಬಂದಿ ಮತ್ತು ಕೆಡೆಟ್‌ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.