ಸೋಮವಾರಪೇಟೆ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು. ವಿವಿಧ ಸಂಘಟನೆಗಳ ಪ್ರಮುಖರು ಮತ್ತು ಅಧಿಕಾರಿಗಳು ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ವೇದಕುಮಾರ್, ಆದಂ. ನಿರ್ವಾಣಪ್ಪ, ಶೈಲೇಂದ್ರ, ನಾರಾಯಣ ಮೂರ್ತಿ ಇದ್ದರು.
ಸೋಮವಾರಪೇಟೆ : ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯತೆ ಬೆಳೆಸುವಲ್ಲಿ ಅಂಬೇಡ್ಕರ್ ಚಿಂತನೆಗಳ ಮಾರ್ಗದರ್ಶನ ಅತ್ಯವಶ್ಯ. ಅವರು ಕಂಡಿದ್ದ ಕನಸಿನ ಭಾರತವನ್ನು ಕಟ್ಟುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಸೂಡ ಅಧ್ಯಕ್ಷ ಕೆ.ಎ. ಆದಂ ಅಭಿಪ್ರಾಯಪಟ್ಟರು.
ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಶನಿವಾರ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಬಾಬಾ ಸಾಹೇಬರ 69ನೇ ಮಹಾ ಪರಿನಿರ್ವಾಣ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದಲಿತಪರ ಹೋರಾಟಗಾರ ಡಿ.ಎಸ್. ನಿರ್ವಾಣಪ್ಪ ಮಾತನಾಡಿದರು. ಪ್ರಮುಖರಾದ ವೇದಕುಮಾರ್, ಎಚ್.ಎ.ನಾಗರಾಜ್, ಹೊನ್ನಪ್ಪ, ಟಿ.ಈ.ಸುರೇಶ್, ಸಂದೀಪ್, ದಾಮೋದರ್, ವಿವಿಧ ಇಲಾಖಾಧಿಕಾರಿಗಳು, ಅಂಗನವಾಡಿ ಶಿಕ್ಷಕರು ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಇದ್ದರು.