ನೆಲಜಿ ಶ್ರೀಇಗ್ಗುತ್ತಪ್ಪ ದೇಗುಲದಲ್ಲಿ ವಾರ್ಷಿಕ ಕುಂಬ್ಯಾರು ಕಲಾಡ್ಚ ಹಬ್ಬ

ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರ್ ಕಲಾಡ್ಚ ಹಬ್ಬವನ್ನು ಸಾಂಪ್ರದಾಯಿಕವಾಗಿ ಶ್ರದ್ಧಾಭಕ್ತಿಯಿಂದ ದೇವರ ಪ್ರದರ್ಶನ ನೃತ್ಯ ಬಲಿ ಜರುಗಿತು.
ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರ್ ಕಲಾಡ್ಚ ಹಬ್ಬವನ್ನು ಸಾಂಪ್ರದಾಯಿಕವಾಗಿ ಶ್ರದ್ಧಾಭಕ್ತಿಯಿಂದ ದೇವರ ಪ್ರದರ್ಶನ ನೃತ್ಯ ಬಲಿ ಜರುಗಿತು.
Published on
ನಾಪೋಕ್ಲು: ಸಮೀಪದ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವ ಸೋಮವಾರ ಸಂಪನ್ನಗೊಂಡಿತು.
ಉತ್ಸವದ ಅಂಗವಾಗಿ ವಿಶೇಷ ಪೂಜೆಗಳು ನೆರವೇರಿದವು. ದೇವಾಲಯದಲ್ಲಿ 13 ತುಲಾಭಾರ ಸೇವೆ ಬಳಿಕ ಭಕ್ತರು ವಿವಿಧ ರೀತಿಯ ಹರಕೆ ರೂಪದಲ್ಲಿ ಕಾಫಿ, ಕಾಳುಮೆಣಸು, ಎಣ್ಣೆ, ಮತ್ತಿತರ ಹರಕೆ ಸಲ್ಲಿಸಿದರು. ನಂತರ ದೇವಾಲಯದಲ್ಲಿ ಮಹಾಪೂಜೆ ಜರುಗಿತು. ಬಳಿಕ ಎತ್ತುಪೋರಾಟ ನಡೆಯಿತು. ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಆನಂತರ ದೇವರ ಪ್ರದರ್ಶನ ನೃತ್ಯ ಬಲಿ ಜರುಗಿತು.
ತಂತ್ರಿ ಸಂತೋಷ ಹೆಬ್ಬಾರ್, ಅರ್ಚಕ ವಿಜಯಕುಮಾರ್ ಕಲ್ಲುರಾಯ, ಮತ್ತು ರಾಜೇಶ್, ಜಯಚಂದ್ರ ಪೂಜಾ ವಿಧಿವಿಧಾನ ನೆರವೇರಿಸಿದರು. ನಂತರ ಇಗ್ಗುತ್ತಪ್ಪ ದೇವರ ಆದಿ ಸ್ಥಳವಾದ ಮಲ್ಮ ಬೆಟ್ಟಕ್ಕೆ ಎತ್ತುಪೋರಾಟದೊಂದಿಗೆ ತೆರಳಿ ವಿವಿಧ ಪೂಜಾ ವಿಧಿವಿಧಾನ ನೆರವೇರಿಸಲಾಯಿತು.
ಈ ಸಂದರ್ಭ ಉತ್ಸವದಲ್ಲಿ ತಕ್ಕ ಮುಖ್ಯಸ್ಥರಾದ ನಾಪನೆರವಂಡ ಪೊನ್ನಪ್ಪ, ಬಾಳೆಯಡ ರಾಜ ಕುಂಞಪ್ಪ, ಕೈಯಂದಿರ ರಮೇಶ್, ಆಡಳಿತ ಮಡಳಿ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ, ಕಾರ್ಯದರ್ಶಿ ಮುಕ್ಕಾಟಿರ ವಿನಯ್, ಖಜಾಂಚಿ ಮನವಟ್ಟಿರ ಪಾಪು ಚಂಗಪ್ಪ, ಆಡಳಿತ ಮಡಳಿ ಸದಸ್ಯರು, ಗ್ರಾಮಸ್ಥರು, ಊರಿನ, ಪರ ಊರಿನ ಭಕ್ತರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net