ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಶ್ರೀ ಉಮಾಮಹೇಶ್ವರ ಕ್ಷೇತ್ರದ ವಾರ್ಷಿಕ ವಿಶೇಷ ಪೂಜೋತ್ಸವ ವಿಶೇಷ ಹೋಮ ಹವನ ಪೂಜಾ ಕೈಂಕರ್ಯಗಳೊAದಿಗೆ ಸೋಮವಾರ ನೆರವೇರಿತು. ಈ ಹಿನ್ನೆಲೆಯಲ್ಲಿ ಶ್ರೀ ಸ್ವಾಮಿಗೆ ವಿಶೇಷ ಪೂಜೆ, ಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ, ಪ್ರಧಾನ ದೇವರಿಗೆ ಹಾಗೂ ಇತರೆ ಉಪ ದೇವತೆಗಳಿಗೆ ವಿಶೇಷ ಪೂಜೆ, ಅಭಿಷೇಕ, ಅರ್ಚನೆ ಇತ್ಯಾದಿ ಪೂಜೆಗಳು ಕೇರಳ ಹರಿಪ್ರಸಾದ್ ನೇತೃತ್ವದ ತಂಡದ ನೆರವೇರಿತು.