ಮಲೇರಿಯಾ ವಿರೋಧಿ ಮಾಸ ಆಚರಣೆ

 ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರ, ಹೆಬ್ಬಾಲೆಯ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಐಇಸಿ ವಿಭಾಗದ ವತಿಯಿಂದ ಪದವಿ ಪೂರ್ವ ಕಾಲೇಜಿನಲ್ಲಿ ಮಲೇರಿಯಾ ವಿರೋಧಿ ಮಾಸಾ ಆಚರಣೆ ಹಾಗೂ ನಶಾ ಮುಕ್ತ ಅಭಿಯಾನ ನಡೆಯಿತು. ಹೆಚ್.ಕೆ. ಶಾಂತಿ, ಪುನೀತಾ, ಸಂಜಯ್, ವಿಜಯ ಮತ್ತಿತರರು ಇದ್ದರು.
ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರ, ಹೆಬ್ಬಾಲೆಯ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಐಇಸಿ ವಿಭಾಗದ ವತಿಯಿಂದ ಪದವಿ ಪೂರ್ವ ಕಾಲೇಜಿನಲ್ಲಿ ಮಲೇರಿಯಾ ವಿರೋಧಿ ಮಾಸಾ ಆಚರಣೆ ಹಾಗೂ ನಶಾ ಮುಕ್ತ ಅಭಿಯಾನ ನಡೆಯಿತು. ಹೆಚ್.ಕೆ. ಶಾಂತಿ, ಪುನೀತಾ, ಸಂಜಯ್, ವಿಜಯ ಮತ್ತಿತರರು ಇದ್ದರು.
Published on
ಮಡಿಕೇರಿ:
ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರ, ಹೆಬ್ಬಾಲೆಯ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಐಇಸಿ ವಿಭಾಗದ ವತಿಯಿಂದ ಪದವಿ ಪೂರ್ವ ಕಾಲೇಜಿನಲ್ಲಿ ಮಲೇರಿಯಾ ವಿರೋಧಿ ಮಾಸ ಆಚರಣೆ ಹಾಗೂ ನಶಾ ಮುಕ್ತ ಅಭಿಯಾನದ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ. ಶಾಂತಿ ಮಾತನಾಡಿ, ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ತೊಂದರೆಗಳು, ಹೆಣ್ಣುಮಕ್ಕಳಿಗೆ ಕ್ಯಾನ್ಸರ್ ಬರದಂತೆ ತಡೆಯಲು ಹೆಚ್.ಪಿ.ವಿ. ಲಸಿಕೆ, ಜೂ. 28 ಕ್ಕೆ ಪಲ್ಸ್ ಪೋಲಿಯೋ ಕಾರ್ಯಕ್ರಮ, ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಸಮಗ್ರವಾದ ಮಾಹಿತಿ ನೀಡಿದರು.
ಜಿಲ್ಲಾ ತಂಬಾಕು ವಿಭಾಗದ ಮೇಲ್ವಿಚಾರಕಿ ಪುನೀತಾ ಮಾತನಾಡಿ, ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ತೊಂದರೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ದಂಡ, ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ - 2003 ಬಗ್ಗೆ ಮಾಹಿತಿ ಒದಗಿಸಿದರು.
ಆರೋಗ್ಯ ನಿರೀಕ್ಷಕ ಸಂಜಯ್ ಮಾತನಾಡಿ, ಮಲೇರಿಯಾ ಮಾಸಾಚರಣೆ, ಡೆಂಗ್ಯೂ ರೋಗದ ಲಕ್ಷಣಗಳು, ಸೊಳ್ಳೆಗಳಿಂದ ಸ್ವಯಂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು, ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಸೊಳ್ಳೆ ಉತ್ಪತ್ತಿ ತಾಣಗಳ ಸಮೀಕ್ಷೆಯನ್ನು ನಡೆಸುವುದು, ಹಾಗೂ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ನೀಡಿದರು.
ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಿಜಯ ಮಾತನಾಡಿ ನಶಾಮುಕ್ತ ಅಭಿಯಾನಕ್ಕೆ ಎಲ್ಲಾ ವಿದ್ಯಾರ್ಥಿಗಳು ಕೈ ಜೋಡಿಸಬೇಕೆಂದರಲ್ಲದೆ ಪರಿಸರ ಸ್ವಚ್ಛತೆ ಬಗ್ಗೆ ಒತ್ತು ನೀಡಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಬಸವರಾಜು, ಶಿಕ್ಷಕರಾದ ಭೋಜೇಗೌಡ, ಸತೀಶ್ , ಆರೋಗ್ಯ ನಿರೀಕ್ಷಕ ಮುಕೇಶ್ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net