ಮಡಿಕೇರಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ತಲಕಾವೇರಿ, ಭಾಗಮಂಡಲ, ಬೇಂಗೂರು, ಕುಂದಚೇರಿ, ನಾಪೋಕ್ಲು, ಬಲ್ಲಮಾವಟಿ, ಹೊದ್ದೂರು, ಮೂರ್ನಾಡು ವ್ಯಾಪ್ತಿಯಲ್ಲಿ ಸಮುದಾಯ ಶೌಚಾಲಯ ನಿರ್ಮಾಣ, ಸ್ವಚ್ಛ ಕುಡಿಯುವ ನೀರಿನ ಘಟಕ ಸ್ಥಾಪನೆ, ಕಸ ವಿಲೇವಾರಿಗೆ ವಿಶೇಷ ವಾಹನ ಸೌಲಭ್ಯ ಹಾಗೂ ನಾಪೋಕ್ಲು ವ್ಯಾಪ್ತಿಯಲ್ಲಿ ನದಿ ತಟದಲ್ಲಿ ತಡೆಗೋಡೆ ನಿರ್ಮಾಣ ಅಲ್ಲದೆ ತೀರದಲ್ಲಿರುವ ಸಾವಿರಕ್ಕೂ ಅಧಿಕ ಮನೆಗಳ ಸ್ಥಳಾಂತರ ಹಾಗೂ ಪುನರ್ವಸತಿ ಕಲ್ಪಿಸುವಂತೆ ಜಿಲ್ಲಾಧಿಕಾರಿ ಜತೆ ಸಮಿತಿ ವತಿಯಿಂದ ಚರ್ಚಿಸಲಾಯಿತು.