ತೆರಿಗೆ ಸಂಗ್ರಹಕ್ಕೆ ಕ್ಯಾಂಪ್ ಆಯೋಜಿಸಲು ಮನವಿ

2026-27ನೇ ಸಾಲಿಗೆ ಆಸ್ತಿ ತೆರಿಗೆ ಮತ್ತು ಉದ್ದಿಮೆ ಪರವಾನಗಿ ತೆರಿಗೆ ಸಂಗ್ರಹ ಮಾಡಲು ಪುರಸಭೆ ವ್ಯಾಪ್ತಿಯಲ್ಲಿ ಕ್ಯಾಂಪ್ ಮಾಡಬೇಕೆಂದು ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಪದಾಧಿಕಾರಿಗಳು ಮುಖ್ಯಾಧಿಕಾರಿ ಟಿ.ಎಸ್. ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು. ಕೆ.ಎಸ್. ನಾಗೇಶ್, ಚಿತ್ರ ರಮೇಶ್, ಎನ್.ವಿ. ಬಾಬು, ಪಿ.ಕೆ. ಜಗದೀಶ್, ಪಿ.ಎಂ.ಮೋಹನ್, ಕೆ.ಎನ್. ದೇವರಾಜ್ ಇದ್ದರು.

Published on
ಕುಶಾಲನಗರ:
ಕುಶಾಲನಗರ ಪುರಸಭೆಗೆ ಸಂಬAಧಿಸಿದAತೆ 2026-27ನೇ ಸಾಲಿಗೆ ಆಸ್ತಿ ತೆರಿಗೆ ಮತ್ತು ಉದ್ದಿಮೆ ಪರವಾನಗಿ ತೆರಿಗೆ ಸಂಗ್ರಹ ಮಾಡಲು ಪುರಸಭೆ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಕ್ಯಾಂಪ್ ಮಾಡಬೇಕೆಂದು ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.
ಬೇರೆ ಬೇರೆ ಸ್ಥಳಗಳಲ್ಲಿ ತೆರಿಗೆ ಸಂಗ್ರಹ ಕ್ಯಾಂಪ್ ಮಾಡುವುದರಿಂದ ನಿರೀಕ್ಷೆಗೂ ಮೀರಿದ ತೆರಿಗೆ ಸಂಗ್ರಹವಾಗುವುದರ ಜತೆಗೆ ಸಾರ್ವಜನಿಕರಿಗೂ ತುಂಬಾ ಅನುಕೂಲವಾಗಲಿದೆ. ಅನವಶ್ಯಕವಾಗಿ ಕಚೇರಿ ಅಲೆಯುವುದು ತಪ್ಪುತ್ತದೆ. ಸಿಬ್ಬಂದಿ ಕಚೇರಿಯಲ್ಲಿ ಇದ್ದರೆ ಬಹಳ ಕೆಲಸದ ಒತ್ತಡವಿರುತ್ತದೆ. ಕ್ಯಾಂಪ್ ಮಾಡಿದರೆ ಸಿಬ್ಬಂದಿಗೆ ಕೇವಲ ತೆರಿಗೆ ಸಂಗ್ರಹದ ಕಡೆ ಗಮನ ಹರಿಸಲು ಸಹಕಾರಿಯಾಗುತ್ತದೆ. ತಕ್ಷಣವೇ ಕ್ಯಾಂಪ್ ಮಾಡುವುದರಿಂದ ಏಪ್ರಿಲ್ 31 ರವರೆಗೆ ಇರುವ ತೆರಿಗೆ ವಿನಾಯಿತಿ ಜನರಿಗೆ ದೊರೆಯುತ್ತದೆ ಎಂದು ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಅಧ್ಯಕ್ಷ ಕೆ.ಎಸ್. ನಾಗೇಶ್ ಅಧಿಕಾರಿಗಳ ಗಮನ ಸೆಳೆದರು. ಈ ಸಮದರ್ಭ ಮಾತನಾಡಿದ ಮುಖ್ಯಾಧಿಕಾರಿ ಟಿ.ಎಸ್. ಗಿರೀಶ್, ಪುರಸಭೆ ವತಿಯಿಂದ ಪ್ರತಿವರ್ಷವೂ ಕ್ಯಾಂಪ್ ಮಾಡುತ್ತಿದ್ದೇವೆ. ಈ ವರ್ಷವೂ ಖಂಡಿತ ಜನರ ಅನುಕೂಲಕ್ಕಾಗಿ ಮಾಡಲಾಗುವುದು ಎಂದರು. ಆಸ್ತಿ ತೆರಿಗೆ ಮತ್ತು ಉದ್ದಿಮೆ ಪರವಾನಗಿ ತೆರಿಗೆಯನ್ನು ಅವೈಜ್ಞಾನಿಕವಾಗಿ ತೆಗೆದುಕೊಳ್ಳದೆ ನಿಯಮಾನಾಸುರ ಪಡೆಯಲು ತಿಳಿಸಿದಾಗ ಕಮರ್ಷಿಯಲ್ ಶೇ 5 ಮತ್ತು ರೆಸಿಡೆನ್ಸಿಯಲ್‌ಗೆ ಶೇ. 3 ಹೆಚ್ಚಳ ಮಾಡಿ ಸಂಗ್ರಹ ಮಾಡಲಾಗುತ್ತಿದೆ ಎಂದು ಮುಖ್ಯಾಧಿಕಾರಿ ಗಿರೀಶ್ ತಿಳಿಸಿದರು.
ಚೇಂಬರ್ ಕಾರ್ಯದರ್ಶಿ ಚಿತ್ರ ರಮೇಶ್, ಖಜಾಂಚಿ ಎನ್.ವಿ. ಬಾಬು, ನಿರ್ದೇಶಕರಾದ ಪಿ.ಕೆ. ಜಗದೀಶ್, ಪಿ.ಎಂ.ಮೋಹನ್, ಕೆ.ಎನ್. ದೇವರಾಜ್ ಮತ್ತಿತ್ತರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net