ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ದ್ವಿತೀಯ ಎಂ.ಕಾಂ. ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕೆ.ಕೆ.ಚಿತ್ರಾವತಿ, ಎನ್.ಪಿ.ರೀತಾ, ಬಿ.ಎಸ್. ದೀಪ್ತಿ, ಎಂ.ಟಿ.ಸಂತೋಷ್ ಇದ್ದರು.
Published on:
Copied
Follow Us
ವಿದ್ಯಾರ್ಥಿಗಳಿಗೆ ಉಪನ್ಯಾಸಕಿ ಕೆ.ಕೆ.ಚಿತ್ರಾವತಿ ಸಲಹೆ
ಗೋಣಿಕೊಪ್ಪಲು: ಇಲ್ಲಿನ ಕಾವೇರಿ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ದ್ವಿತೀಯ ಎಂ.ಕಾಂ. ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆಸಲಾಯಿತು.
ಈ ಸಂದರ್ಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂ.ಕಾಂ.ವಿಭಾಗದ ಮುಖ್ಯಸ್ಥೆ ಕೆ.ಕೆ.ಚಿತ್ರಾವತಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕಲಿತ ಜ್ಞಾನ ಮತ್ತು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ಒಳ್ಳೆಯ ಬದುಕು ಕಟ್ಟಿಕೊಳ್ಳಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲಿಷ್ ಭಾಷೆಯ ಮೇಲೆ ಹಿಡಿತ ಅಗತ್ಯ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಂಡು ಸರ್ಕಾರಿ ಕೆಲಸ ಪಡೆಯಲು ಪ್ರಯತ್ನಿಸಬೇಕು. ಸಿಗದಿದ್ದಲ್ಲಿ ಖಾಸಗಿ ಕ್ಷೇತ್ರದಲ್ಲಿ ಬಹಳಷ್ಟು ಅವಕಾಶಗಳಿವೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಪರಿಸ್ಥಿತಿಯನ್ನು ನಿಭಾಯಿಸುವ ಗುಣ ಇರಬೇಕು. ಶ್ರಮದೊಂದಿಗೆ ಯುಕ್ತಿಯಿಂದಲೂ ಕೆಲಸ ಮಾಡಬೇಕು. ಯಶಸ್ವಿಯಾಗಲು ಸುಲಭ ದಾರಿ ಇಲ್ಲ. ಅವಿರತ ಪರಿಶ್ರಮವೇ ಮುಖ್ಯ ಎಂದು ಹೇಳಿದರು.
ದ್ವಿತೀಯ ವರ್ಷದ ವಿದ್ಯಾರ್ಥಿಗಳು ತಮ್ಮ 2 ವರ್ಷದ ಕಾಲೇಜು ಅನುಭವಗಳನ್ನು ಹಂಚಿಕೊಂಡರು. ಪ್ರಥಮ ವರ್ಷದ ವಿದ್ಯಾರ್ಥಿಗಳು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಉಪನ್ಯಾಸಕರಾದ ಎನ್.ಪಿ.ರೀತಾ, ಬಿ.ಎಸ್.ದೀಪ್ತಿ, ಕಾವೇರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಟಿ. ಸಂತೋಷ್ ಇದ್ದರು.