ಸ್ತ್ರೀರೋಗ ತಜ್ಞರ ನೇಮಕ ಮಾಡಿ

ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ರುಬೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಿದರು. ರೀನಾ ತುಳಸಿ, ಉದಯ, ಗಣೇಶ್, ಮೋಹನ್ ಇತರರಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ರುಬೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಿದರು. ರೀನಾ ತುಳಸಿ, ಉದಯ, ಗಣೇಶ್, ಮೋಹನ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರೀನಾ ತುಳಸಿ ಒತ್ತಾಯ
ಸಿದ್ದಾಪುರ: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ರುಬೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಿದರು.
ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ, ಹಳೆಯ ಹಾಗೂ ದುರಸ್ತಿಗೊಳಿಸದ ಯಂತ್ರೋಪಕರಣ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಕಾರ್ಯಕರ್ತರು ಗಮನಿಸಿದರು. ಬಳಿಕ ವೈದ್ಯಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರೀನಾ ತುಳಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 12 ವರ್ಷಗಳಲ್ಲಿ ದೇಶದ ಅಭಿವೃದ್ಧಿಗೆ ಹಲವು ಕೊಡುಗೆ ನೀಡಿದ್ದು, ಇಡೀ ವಿಶ್ವದ ಗಮನ ಭಾರತದೆಡೆಗೆ ಸೆಳೆಯುವಂತಹ ಸಾಧನೆ ಮಾಡಿದ್ದಾರೆ ಅವರಿಗೆ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯ ದೊರೆಯಲಿ ಎಂದು ಹಾರೈಸಿದರು.
ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಇದ್ದು, ಸ್ತ್ರೀರೋಗ ಮತ್ತು ಮಕ್ಕಳ ತಜ್ಞರನ್ನು ಕೂಡಲೇ ನೇಮಕ ಮಾಡಬೇಕು. ಎಕ್ಸ್‌ರೇ ಸೇರಿದಂತೆ ಹಲವು ಯಂತ್ರೋಪಕರಣಗಳು ಹಳೆಯದಾಗಿ ದುರಸ್ತಿಗೀಡಾಗಿವೆ. ಅವುಗಳ ಬದಲಿಗೆ ಹೊಸ ಯಂತ್ರೋಪಕರಣಗಳನ್ನು ಒದಗಿಸಿ, ಆಸ್ಪತ್ರೆಯ ಸೇವೆಗಳನ್ನು ಬಲಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಉದಯ, ಗಣೇಶ್, ಮೋಹನ್, ಮಧುಮಾದಪ್ಪ, ಸೂರಿ, ಪ್ರಜಿತ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net