ನಕ್ಷತ್ರ ಆಮೆ ಮಾರಾಟಕ್ಕೆ ಯತ್ನಿಸುತ್ತಿದ್ದವರ ಬಂಧನ

ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿ ವಶಪಡಿಸಿಕೊಂಡ ನಕ್ಷತ್ರ ಆಮೆ
ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿ ವಶಪಡಿಸಿಕೊಂಡ ನಕ್ಷತ್ರ ಆಮೆ
Published on
ಮಡಿಕೇರಿ:
ನಕ್ಷತ್ರ ಆಮೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಸರಗೊಡಿನ ಸಿ.ಕೆ. ಶ್ರೀಧರನ್ (70) ಮತ್ತು ವಿಷ್ಣು ಆಚಾರ್ಯ (68) ಬಂಧಿತ ಆರೋಪಿಗಳು.
ನಗರದ ಕನ್ನಂಡ ಪಡುಬೀರ ವೃತ್ತದ ಬಳಿ ಇರುವ ಬಸ್ಸು ತಂಗುದಾಣದಲ್ಲಿ ಇಬ್ಬರು ವ್ಯಕ್ತಿಗಳು ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎನ್ನುವ ಸುಳಿವಿನ ಆಧಾರದಲ್ಲಿ ಮಂಗಳವಾರ ಸಂಜೆ ದಾಳಿ ಮಾಡಿದ ಸಂದರ್ಭ ಈ ಇಬ್ಬರು ಸಿಕ್ಕಿಬಿದ್ದಿದ್ದಾರೆ. ಇವರಿಂದ ಸ್ವತ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪೊಲೀಸ್ ಉಪ ಮಹಾನಿರೀಕ್ಷಕಿ ಜಿ. ಸಂಗೀತಾ,ಪೊಲೀಸ್ ಅಧೀಕ್ಷಕ ಪವನ್ ನೆಜ್ಜೂರು ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ ಶಿವಶಂಕರ್, ಸಿಬ್ಬಂದಿ ಎನ್.ಕೆ. ಉಮೇಶ್, ಕೆ.ಪಿ. ಶನಂತ, ಹೆಚ್.ಎಸ್. ದಿವ್ಯಶ್ರೀ, ಎಂ. ಸ್ವಾಮಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net