ನಿಷೇಧಿತ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದವರ ಬಂಧನ

ಕೆ.ಆರ್. ಮುತ್ತುರಾಜು  ಎಸ್. ಪ್ರಶಾಂತ್  ಪೂಣಚ್ಚ
ಕೆ.ಆರ್. ಮುತ್ತುರಾಜು ಎಸ್. ಪ್ರಶಾಂತ್ ಪೂಣಚ್ಚ
Published on
ಮಡಿಕೇರಿ:
ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸಂಪಿಗೆಕಟ್ಟೆ ರಸ್ತೆ ಸಮೀಪ ಮಾದಕ ವಸ್ತುಗಳ ಮಾರಾಟ, ಸೇವನೆ ನಡೆಯುತ್ತಿರುವ ಕುರಿತು ಲಭಿಸಿದ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು, ಮೂವರು ಆರೋಪಿಗಳನ್ನು ನಿಷೇಧಿತ ಮಾದಕ ವಸ್ತುವಿನೊಂದಿಗೆ ಬಂಧಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕು ಕುಂದನಹಳ್ಳಿ ಗ್ರಾಮದ ಕೆ.ಆರ್. ಮುತ್ತುರಾಜು (24), ಚಿಟ್ಟೆನಹಳ್ಳಿ ಗ್ರಾಮದ ಕೆ.ಎಸ್. ಪ್ರಶಾಂತ್ (34) ಹಾಗೂ ಬೆಂಗಳೂರು ಚೆನ್ನಕೇಶವನಗರದ ಪೂಣಚ್ಚ (39) ಬಂಧಿತ ಆರೋಪಿಗಳು. ಆರೋಪಿಗಳಿಂದ 10.05 ಗ್ರಾಂ ಎಂಡಿಎAಎ ಮಾದಕ ವಸ್ತು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಆಟೋ ಮತ್ತು ಒಂದು ಕಾರನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಬಂಧಿತರ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಡಿಕೇರಿ ಉಪವಿಭಾಗದ ಡಿಎಸ್‌ಪಿ ಪಿ.ಎ. ಸೂರಜ್, ಮಡಿಕೇರಿ ನಗರ ವೃತ್ತದ ಸಿಪಿಐ ಹೆಚ್.ವಿ. ಚಂದ್ರಶೇಖರ್, ಪಿಎಸ್‌ಐ ಎಸ್.ಎಸ್. ಅನ್ನಪೂರ್ಣ, ಡಿಸಿಆರ್‌ಬಿ ಮತ್ತು ಮಡಿಕೇರಿ ಪೊಲೀಸ್ ಸಿಬ್ಬಂದಿಯನ್ನೊಳಗೊAಡ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.
ಯುವಕ-ಯುವತಿಯರು ಮಾದಕ ವ್ಯಸನಕ್ಕೆ ಬಲಿಯಾಗುವುದನ್ನು ತಡೆಯಲು, ಸಾರ್ವಜನಿಕರು ಮಾದಕ ವಸ್ತುಗಳ ಮಾರಾಟ ಅಥವಾ ಬಳಕೆಯ ಕುರಿತು ಮಾಹಿತಿ ಲಭಿಸಿದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ತಿಳಿಸಬೇಕಾಗಿ ಎಸ್‌ಪಿ ಆರ್‌ಎನ್ ಬಿಂದುಮಣಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net