ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಆಚರಿಲಾಯಿತು. ರೆ.ಫಾ.ಜೇಮ್ಸ್ ಡೊಮಿನಿಕ್, ಫಾ. ವಿಲ್ಫ್ರೆಡ್ ಆಂಟೋನಿ, ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಸವರಿನ್ ಡಿಸೋಜಾ ಇದ್ದರು.
ವಿರಾಜಪೇಟೆ : ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ.ಜೇಮ್ಸ್ ಡೊಮಿನಿಕ್ ಧ್ವಜಾರೋಹಣ ಮಾಡಿದರು.
ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು. ಸಹಾಯಕ ಗುರುಗಳಾದ ಫಾ. ವಿಲ್ಫ್ರೆಡ್ ಆಂಟೋನಿ, ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಸವರಿನ್ ಡಿಸೋಜಾ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿಯರಾದ ಸಿಸ್ಟರ್ ರೋಸಿ, ಸಿಸ್ಟರ್ ವಂದನಾ ಲೋಬೊ ಹಾಜರಿದ್ದರು.