ಸಿದ್ದಾಪುರ: ಸಮೀಪದ ಪಾಲಿಬೆಟ್ಟದ ಹೊಸಹಳ್ಳಿ ಕಾಫಿ ತೋಟದ ಲೈನ್ ಮನೆಯಲ್ಲಿ ಮಂಗಳವಾರ ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಾಸಗಿ ಸಂಸ್ಥೆಗೆ ಸೇರಿದ ಹೊಸಹಳ್ಳಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಕುಮಾರ್ ಎಂಬುವರ ಮಗ ಆಟೋ ಚಾಲಕ ಸುಮಂತ್ 23 ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವನು. ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.