ಹಳೇ ತಾಲೂಕಿನಿಂದ ಎಮ್ಮೆಮಾಡು ಜಂಕ್ಷನ್‌ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಈ ರಸ್ತೆಯಲ್ಲಿ ಸಂಚರಿಸುವ ಸಾಧ್ಯವಾಗುತ್ತಿಲ್ಲ. ಆಟೋ ಚಾಲಕರು, ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ರಸ್ತೆ ದುರಸ್ತಿ ಕೈಗೊಳ್ಳಬೇಕು ಎಂದು ಆಟೋ ಚಾಲಕರು, ಸಾರ್ವಜನಿಕರು ಆಗ್ರಹಿಸಿದರು.