ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆಯಡಿ ಶುಕ್ರವಾರ ತಪಾಸಣೆ ನಡೆಸಿ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಲಾಯಿತು. ಯತ್ನಟ್ಟಿ, ಶಿರಾಜ್ ಅಹಮ್ಮದ್, ಜರೀನಾ ಇತರರಿದ್ದರು.
ಮಡಿಕೇರಿ: ತಾಲೂಕಿನ ವಿವಿಧೆಡೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆಯಡಿ ತಪಾಸಣೆ ನಡೆಸಿ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಲಾಯಿತು.
ಮಡಿಕೇರಿ, ಮೇಕೇರಿ, ಹಾಕತ್ತೂರು, ಮೂರ್ನಾಡು, ಬಾವಲಿ, ಪಾರಾಣೆ, ವಾಟೆಕಾಡು ಹಾಗೂ ನರಿಯಂದಡ-ಚೆಯ್ಯಂಡಾಣೆ ವ್ಯಾಪ್ತಿಯಲ್ಲಿ ತಪಾಸಣೆ ಕೈಗೊಳ್ಳಲಾಯಿತು. ಈ ವೇಳೆ ಹೋಟೆಲ್, ದಿನಸಿ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕಾಫಿ-ಟೀ ಕ್ಯಾಂಟೀನ್, ಗೃಹೋಪಯೋಗಿ ಹಾಗೂ ದಿನಬಳಕೆ ವಸ್ತುಗಳ ಮಾರಾಟ ಮಳಿಗೆಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳು ಮತ್ತು ಕಟ್ಟಡ ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ಅಂಗಡಿ ಹಾಗೂ ಸಂಸ್ಥೆಗಳ ಮಾಲೀಕರಿಗೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ ಕಾಯ್ದೆ ಹಾಗೂ ಬಾಲಕಾರ್ಮಿಕ ಪದ್ಧತಿಯ ದು?್ಪರಿಣಾಮಗಳ ಕುರಿತು ಮಾಹಿತಿ ನೀಡಲಾಯಿತು. ಕಾಯ್ದೆಗೆ ಸಂಬಂಧಿಸಿದ ಜಾಗೃತಿ ಬಿತ್ತಿಪತ್ರಗಳನ್ನು ವಿತರಿಸುವುದರ ಜೊತೆಗೆ, ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ ಎಂಬ ಸ್ವಯಂ ಘೋ?ಣಾ ಪತ್ರಗಳನ್ನು ಪಡೆಯುವ ಮೂಲಕ ಜಾಗೃತಿ ಮೂಡಿಸಲಾಯಿತು.
ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಡಿಕೇರಿ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ಹಾಗೂ ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ(ಪ್ರಭಾರ) ಎಂ.ಎಂ.ಯತ್ನಟ್ಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಆರ್.ಶಿರಾಜ್ ಅಹಮ್ಮದ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಜರೀನಾ ಪಾಲ್ಗೊಂಡಿದ್ದರು.