ಮಾದಕ ವಸ್ತು ದುಷ್ಪರಿಣಾಮ ಕುರಿತು ಜಾಗೃತಿ

ಸೋಮವಾರಪೇಟೆ ಗೋಣಿಮರೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕ ಹನುಮಂತ ತರವಾರ ಉದ್ಘಾಟಿಸಿದರು. ಸುನಿತಾ, ವನ್ನೇಶ್ ಇದ್ದರು.
ಸೋಮವಾರಪೇಟೆ ಗೋಣಿಮರೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕ ಹನುಮಂತ ತರವಾರ ಉದ್ಘಾಟಿಸಿದರು. ಸುನಿತಾ, ವನ್ನೇಶ್ ಇದ್ದರು.
Published on
ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗೋಣಿಮರೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕ ಹನುಮಂತ ತರವಾರ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಅನುಷಾ ಅವರು ಮಾದಕ ವಸ್ತು ಸೇವನೆಯಿಂದ ಆಗುವ ಸಮಸ್ಯೆಗಳು ದುಷ್ಪರಿಣಾಮ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಸುನಿತಾ, ಸಹ ಶಿಕ್ಷಕ ವನ್ನೇಶ್ ಮತ್ತು ಕೆರೆ ಸಮಿತಿ ಅಧ್ಯಕ್ಷ ರೇವಣ್ಣ ಶೌರ್ಯ, ಸದಸ್ಯರಾದ ಸುರೇಂದ್ರ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net