ಮೂರ್ನಾಡು ಪದವಿಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕ ಮತ್ತು ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುವಿನ ಬಳಕೆಯ ದುಷ್ಪರಿಣಾಮದ ಬಗ್ಗೆ ದಿನೇಶ್ ಮಾತನಾಡಿದರು. ಗೋಪಾಲ್, ಪುಟ್ಟಮ್ಮ, ವೇಣು ಅಪ್ಪಣ್ಣ, ದೇವಕಿ ಇದ್ದರು.
ನಾಪೋಕ್ಲು: ಇಲ್ಲಿಗೆ ಸಮೀಪದ ಮೂರ್ನಾಡು ಪದವಿಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕ ಮತ್ತು ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುವಿನ ಬಳಕೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ಗೋಪಾಲ್ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಠಾಣೆಯ ಸಹಾಯಕ ಅಧಿಕಾರಿ ದಿನೇಶ್ ಮಾದಕ ವಸ್ತುವಿನ ದುಷ್ಪರಿಣಾಮ ಮತ್ತು ಅಪ್ರಾಪ್ತರು ವಾಹನ ಚಲಾಯಿಸುವುದರಿಂದ ಆಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಸಂಸ್ಥೆ ಕಾರ್ಯದರ್ಶಿ ವೇಣು ಅಪ್ಪಣ್ಣ ವಹಿಸಿದ್ದರು. ಪಿಎಸ್‌ಐ ಪುಟ್ಟಮ್ಮ ಮತ್ತು ಪ್ರಾಂಶುಪಾಲರಾದ ದೇವಕಿ ಮಾತನಾಡಿದರು. ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.