ಕಾರ್ಮಿಕ ಇಲಾಖೆಯ ಅಧಿಕಾರಿ ಎಂ.ಎಂ.ಯತ್ನಟ್ಟಿ ಮಾತನಾಡಿ, ಕಾರ್ಮಿಕ ಕಾಯ್ದೆಯಡಿ ಅಸಂಘಟಿತ ಕಾರ್ಮಿಕರಿಗೆ ಹಲವು ಪರಿಹಾರ ಸೌಲಭ್ಯಗಳಿವೆ. ಕಟ್ಟಡ ಕಾರ್ಮಿಕರ ಯೋಜನೆಯಡಿ ೧೩,೬೩೬, ಇ-ಶ್ರಮ್ ಯೋಜನೆಯಡಿ ೬೯,೭೯೮, ದಿನಪತ್ರಿಕೆ ವಿತರಕರ ಯೋಜನೆಯಡಿ ೪೮, ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ ೫೬, ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ದನ್ ಯೋಜನೆಯಡಿ ೧,೪೮೩, ಅಂಬೇಡ್ಕರ್ ಸಹಾಯಹಸ್ತ ಯೋಜನೆಯಡಿ ೪,೫೧೪ ಹಾಗೂ ಖಾಸಗಿ ವಾಣಿಜ್ಯ ಚಾಲಕರ ವಿಮಾ ಯೋಜನೆಯಡಿ ೧,೧೦೮ ಮಂದಿ ಸ್ಮಾರ್ಟ್ ಕಾರ್ಡ್ ಪಡೆದಿದ್ದಾರೆ ಎಂದು ತಿಳಿಸಿದರು.