ಪಾಲಿಬೆಟ್ಟದಲ್ಲಿ ಎಸ್‌ಐಆರ್ ಅರಿವಿಗೆ ಜಾಗೃತಿ ಜಾಥಾ

 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇತೀಚೆಗೆ ಜಾಗೃತಿ ಜಾಥಾ ನಡೆಸಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇತೀಚೆಗೆ ಜಾಗೃತಿ ಜಾಥಾ ನಡೆಸಿದರು.
Published on
ಸಿದ್ದಾಪುರ: ರಾಜ್ಯ ಚುನಾವಣಾ ಆಯೋಗ ಆರಂಭಿಸಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇತೀಚೆಗೆ ಜಾಗೃತಿ ಜಾಥಾ ನಡೆಸಿದರು.
ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಕೇಶ್, ಪೊಲೀಸ್ ಇಲಾಖೆಯ ಶ್ರೀನಿವಾಸ್ ಹಾಗೂ ಸಜಿತ್, ಅರಣ್ಯ ಇಲಾಖೆಯ ಪಿ.ಟಿ.ಶಶಿ ಚಾಲನೆ ನೀಡಿದರು. ಕರಪತ್ರಗಳನ್ನು ಜನರಿಗೆ ವಿತರಿಸುವುದರ ಜತೆಗೆ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಎಸ್‌ಐಆರ್ ಕುರಿತು ಅರಿವು ಮೂಡಿಸಿದರು.
ಪಾಲಿಬೆಟ್ಟ ವೃತ್ತದಲ್ಲಿ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ಮತದಾರರ ಜಾಗೃತಿ ಪ್ರತಿಜ್ಞೆ ಸ್ವೀಕರಿಸಿದರು.
ಪ್ರಾಂಶುಪಾಲ ಕೆ.ಕೆ.ಶೈನ್ ಹಾಗೂ ಉಪನ್ಯಾಸಕ ಪಿ.ಆರ್.ಶಿವದಾಸ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net