ಶಿಬಿರದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರೀತಂ ಪೊನ್ನಪ್ಪರ ಈ ಶಿಬಿರದಲ್ಲಿ ಸಾಮಾಜಿಕ ಜವಾಬ್ದಾರಿ, ಆರೋಗ್ಯಯುತ ಆಹಾರ, ಭೂಮಿ ಮತ್ತು ನಾನು, ಪ್ರಕೃತಿ ಮತ್ತು ಪರಂಪರೆ, ನೈತಿಕತೆ ಮತ್ತು ಮೌಲ್ಯಗಳು ಎಂಬ ಒಟ್ಟು ಐದು ಆಶಯಗಳ ಮೇಲೆ ಐದು ದಿನಗಳು ಅರಿವು ಮೂಡಿಸಲಾಗುತ್ತದೆ. ಇಲ್ಲಿ ಮಕ್ಕಳು ಬರೆಯುವುದಿಲ್ಲ, ಓದುವುದಿಲ್ಲ. ಆದರೆ ಚಟುವಟಿಕೆಗಳ ಮೂಲಕ ಅನುಭವಿಸಿ ಕಲಿಯುತ್ತಾರೆ ಹಾಗೂ ಮುಂದಿನ ದಿನಗಳಲ್ಲಿ ಇಲ್ಲಿ ಕಲಿತದನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದರು.