ಲವ್ ಜಿಹಾದ್ ವಿರುದ್ಧ ಜಾಗೃತರಾಗಿರಿ

ಸಿದ್ದಾಪುರದಲ್ಲಿ ಲವ್ ಜಿಹಾದ್ ಹಾಗೂ ಮತಾಂತರ ಪ್ರಕರಣಗಳನ್ನು ಖಂಡಿಸಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ವಿವಿಧ ಸಂಘಟನೆಗಳ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಸಿದ್ದಾಪುರದಲ್ಲಿ ಲವ್ ಜಿಹಾದ್ ಹಾಗೂ ಮತಾಂತರ ಪ್ರಕರಣಗಳನ್ನು ಖಂಡಿಸಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ವಿವಿಧ ಸಂಘಟನೆಗಳ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • love jihad
ಸಿದ್ದಾಪುರ: ಲವ್ ಜಿಹಾದ್ ಹಾಗೂ ಲ್ಯಾಂಡ್ ಜಿಹಾದ್ ವಿರುದ್ಧ ಹಿಂದೂ ಸಮುದಾಯ ಜಾಗೃತರಾಗಬೇಕಾಗಿದೆ ಎಂದು ಹಿಂದೂ ಸುರಕ್ಷಾ ಸಮಿತಿ ಸಂಯೋಜಕ ಕುಕ್ಕೇರ ಅಜಿತ್ ಕರೆ ನೀಡಿದರು.
ಲವ್ ಜಿಹಾದ್ ಹಾಗೂ ಮತಾಂತರ ಪ್ರಕರಣಗಳನ್ನು ಖಂಡಿಸಿ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಮಂಗಳವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರೀತಿ, ಪ್ರೇಮದ ನಾಟಕವಾಡಿ ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ಲವ್ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸಿದರು.
ಕೊಡಗು ಜಿಲ್ಲೆಯಲ್ಲಿ ಲ್ಯಾಂಡ್ ಜಿಹಾದ್ ಕೂಡ ವ್ಯಾಪಕವಾಗಿ ನಡೆಯುತ್ತಿದ್ದು, ಈ ಕುರಿತು ಹಿಂದೂ ಸಮುದಾಯ ಎಚ್ಚರಿಕೆಯಿಂದ ಇರಬೇಕೆಂದು ಹೇಳಿದರು.
ಪುತ್ತೂರಿನ ಗುಣರಾಜ್ ಭಟ್ ಮಾತನಾಡಿ, ಲವ್ ಜಿಹಾದ್ ಪ್ರಕರಣಗಳು ಕೇವಲ ಕೊಡಗು ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಇಡೀ ದೇಶಾದ್ಯಂತ ಹಿಂದೂ ಹುಡುಗಿಯರನ್ನು ಗುರಿಯಾಗಿಸಿಕೊಂಡು ಇಂತಹ ಪ್ರಕರಣಗಳು ನಡೆಯುತ್ತಿವೆ ಎಂದು ಹೇಳಿದರು. ಈ ಕುರಿತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಿದ್ದಾಪುರ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಸಿದ್ದಾಪುರ ಬಸ್ ನಿಲ್ದಾಣದವರೆಗೆ ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ ವಿವಿಧ ಸಂಘಟನೆಗಳ ನೂರಾರು ಮಂದಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭ ಉತ್ತಪ್ಪ, ರಮೇಶ್, ಅನಿತಾ ಪೂವಯ್ಯ, ಚಂದ್ರು, ಮಾಜಿ ಸಚಿವರಾದ ಎಂ.ಪಿ. ಅಪ್ಪಚ್ಚು ರಂಜನ್, ಮಾಜಿ ಸಭಾಪತಿ ಕೆ.ಜಿ. ಬೋಪಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net