ಶೌಚಗೃಹ ನಿರ್ಮಾಣಕ್ಕೆ ಭೂಮಿಪೂಜೆ

 ವಿರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದಲ್ಲಿ ಹೈಟೆಕ್ ಶೌಚಗೃಹ  ನಿರ್ಮಾಣ ಕಾಮಗಾರಿಗೆ ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ ಹಾಗೂ ವಿರಾಜಪೇಟೆ ಪುರಸಭೆ ಗಾಂಧಿನಗರ ವಾರ್ಡ್ ಮಾಜಿ ಸದಸ್ಯೆ ಸುನಿತಾ ಭೂಮಿಪೂಜೆ ನೆರವೇರಿಸಿದರು. ಬಿ.ಆರ್. ಸಬಿತಾ, ಪ್ರೇಮಾ ಮಂಜುನಾಥ್, ಬಿ.ಎನ್. ಭಾರತಿ ಇತರರು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ
ವಿರಾಜಪೇಟೆ: ವಿರಾಜಪೇಟೆಯ ನಂ.371ನೇ ಕೊಡಗು ಮಹಿಳಾ ಸಹಕಾರ ಸಂಘ (ಮಹಿಳಾ ಸಮಾಜ)ದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಹೈಟೆಕ್ ಶೌಚಗೃಹ ನಿರ್ಮಾಣ ಕಾಮಗಾರಿಗೆ ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ ಹಾಗೂ ವಿರಾಜಪೇಟೆ ಪುರಸಭೆ ಗಾಂಧಿನಗರ ವಾರ್ಡ್ ಮಾಜಿ ಸದಸ್ಯೆ ಸುನಿತಾ ಅವರು ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದರು.
ಮಹಿಳಾ ಸಹಕಾರ ಸಂಘದ ಉಪಾಧ್ಯಕ್ಷೆ ಬಿ.ಆರ್. ಸಬಿತಾ, ನಿರ್ದೇಶಕರಾದ ಆಶಾ ಚಿಣ್ಣಪ್ಪ, ಯು.ಕೆ. ಪೊನ್ನಮ್ಮ, ಕುಸುಮಾ ಸೋಮಣ್ಣ, ಜಯಲೀಲಾ ಸತೀಶ್, ಪಿ.ಕೆ. ನೀಲಮ್ಮ, ಪ್ರೇಮಾ ಮಂಜುನಾಥ್, ಬಿ.ಎನ್. ಭಾರತಿ, ಬಿ.ಯಶೋದಾ, ಎಚ್.ಆರ್. ಪುಷ್ಪಾ ವಾಸು, ಪುಷ್ಪಾ ಐತಪ್ಪ, ಮೆಟಿಲ್ಡಾ ಲೋಬೋ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಜಿ. ಪುಷ್ಪಲತಾ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net