ರಾಷ್ಟçದ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ 1990 ಅನ್ವಯ ಜನನ ಮತ್ತು ಮರಣ ನೋಂದಣಿ ಕಡ್ಡಾಯವಾಗಿದ್ದು, ಆ ನಿಟ್ಟಿನಲ್ಲಿ ಕಾಲ ಕಾಲಕ್ಕೆ ಈ ಕಾರ್ಯ ಆಗಬೇಕು. ಪ್ರಸ್ತುತ ಜನನ ಮತ್ತು ಮರಣ ನೋಂದಣಿಯನ್ನು ಗ್ರಾಮೀಣ ಭಾಗದಲ್ಲಿ 2015 ರ ಏಪ್ರಿಲ್, 01 ರಿಂದ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಜನ್ಮ ತಂತ್ರಾAಶದ ಮೂಲಕ ಆನ್‌ಲೈನ್ ನೋಂದಣಿಯನ್ನು ನಿರ್ವಹಿಸಲಾಗುತ್ತಿದ್ದು, ಈ ಕಾರ್ಯದ ಪ್ರಗತಿಯನ್ನು ಸಾಧಿಸಬೇಕು. ಜನನ ಮತ್ತು ಮರಣ ನೋಂದಣಿ ಸಂಬAಧಿಸಿದAತೆ ಆಯಾಯ ಕಾಲದಲ್ಲಿ ಪಡೆಯುವಂತಾಗಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಜನನ ಮತ್ತು ಮರಣ ಪ್ರಮಾಣ ಪತ್ರವನ್ನು ಆಯಾಯ ಕಾಲದಲ್ಲಿಯೇ ಪಡೆದುಕೊಳ್ಳುವಂತಾಗಬೇಕು. ಈಗಾಗಲೇ ಜನನ ಮತ್ತು ಮರಣ ನೋಂದಣಿಯನ್ನು ಗ್ರಾ.ಪಂ.ಕಾರ್ಯದರ್ಶಿಯವರನ್ನು ಉಪ ನೋಂದಣಾಧಿಕಾರಿಯಾಗಿ ನೇಮಿಸಲಾಗಿದೆ. ಆ ನಿಟ್ಟಿನಲ್ಲಿ ಗ್ರಾ.ಪಂ.ವ್ಯಾಪ್ತಿಯಲ್ಲಿ 30 ದಿನದೊಳಗೆ ಜನನ ಮತ್ತು ಮರಣ ನೋಂದಣಿ ಮಾಡಬೇಕು. 30 ದಿನದ ನಂತರ ಗ್ರಾಮ ಆಡಳಿತ ಅಧಿಕಾರಿಯನ್ನು ನೋಂದಣಿ ಅಧಿಕಾರಿಯಾಗಿ ನೇಮಿಸಲಾಗಿದ್ದು, ಈ ನೋಂದಣಿಯನ್ನು 30 ದಿನದೊಳಗೆ ಇ-ಜನ್ಮ ತಂತ್ರಾAಶದಲ್ಲಿ ದಾಖಲು ಮಾಡಬೇಕು. ಈಗಾಗಲೇ ದತ್ತು ಮಕ್ಕಳ ಜನನ ಪ್ರಮಾಣ ಪತ್ರವನ್ನು 2022 ರ ಸೆಕ್ಷನ್ 40 ಮತ್ತು 48 ರಂತೆ ತಿದ್ದುಪಡಿ ಮಾಡಲಾಗಿದ್ದು, ಯಾವುದೇ ಏಜೆನ್ಸಿಗಳು ದತ್ತು ಮಕ್ಕಳನ್ನು ಪಡೆಯಲು ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಂಡು ಜನನ ಪ್ರಮಾಣ ಪತ್ರವನ್ನು ನಿಯಮಾನುಸಾರ ಪಡೆಯಬಹುದಾಗಿದೆ. ಜನನ ಮತ್ತು ಮರಣ ನೋಂದಣಿ ವ್ಯವಸ್ಥೆಯಲ್ಲಿ ಸರಳೀಕರಣಗೊಳಿಸುವ ಮತ್ತು ನಾಗರಿಕ ಸ್ನೇಹಿ ಮಾಡುವಲ್ಲಿ ಮುಂದಾಗಲಾಗಿದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿನ ಜನನ ಪ್ರಮಾಣ ಪತ್ರವನ್ನು ಎರಡು ಮೂರು ದಿನದೊಳಗೆ ಪಡೆಯಬಹುದಾಗಿದೆ. ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆರೋಗ್ಯ ಅಧಿಕಾರಿಯವರು ನೋಂದಣಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು.