ಬಿಜೆಪಿ ಕಚೇರಿ ಉದ್ಘಾಟನೆ

 ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲ ಕಚೇರಿಯನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು. ನಾಪಂಡ ರವಿ ಕಾಳಪ್ಪ, ಮಾಚಿಮಂಡ ಸುವಿನ್ ಗಣಪತಿ, ಮಂಡೇಪAಡ ಸುಜಾ ಕುಶಾಲಪ್ಪ, ಕೆ.ಜಿ. ಬೋಪಯ್ಯ ಮತ್ತಿತರರು ಇದ್ದರು.

Published on
ಗೋಣಿಕೊಪ್ಪಲು:
ಗೋಣಿಕೊಪ್ಪಲು ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯಲ್ಲಿರುವ ಟಾಸ್ ಕಟ್ಟಡದಲ್ಲಿ ಭಾರತೀಯ ಜನತಾ ಪಾರ್ಟಿ ವಿರಾಜಪೇಟೆ ಮಂಡಲ ಕಚೇರಿಯನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಂಗಳವಾರ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ಪಕ್ಷದ ಕಚೇರಿ ಉದ್ಘಾಟನೆಯೊಂದಿಗೆ ಪಕ್ಷದ ಬೆಳವಣಿಗೆಯ ಭಾವನೆ ಹೆಚ್ಚಾಗಬೇಕು. ಕೊಡಗು ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆ ದೃಷ್ಟಿಯಿಂದ ಹೆಚ್ಚು ಕಾರ್ಯಾಲಯಗಳ ಅವಶ್ಯಕತೆಯಿದೆ. ಮುಂಬರುವ ಚುನಾವಣೆಗಳನ್ನು ಎದುರಿಸಲು ಹಾಗೂ ಕಾರ್ಯತಂತ್ರಗಳನ್ನು ರೂಪಿಸಲು ಕಾರ್ಯಲಯಗಳು ಶಕ್ತಿ ತುಂಬಲಿದೆ ಎಂದು ಹೇಳಿದರು.
ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ಎಂಎಲ್‌ಸಿ ಮಂಡೇಪAಡ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಮಂಡಲ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ, ಜಿಲ್ಲಾ ಉಪಾಧ್ಯಕ್ಷರುಗಳಾದ ಅರುಣ್ ಭೀಮಯ್ಯ, ಗುಮ್ಮಟ್ಟೀರ ಕಿಲನ್, ಜಿಲ್ಲಾ ಪ್ರಧಾ ಕಾರ್ಯದರ್ಶಿ ನೆಲ್ಲೀರ ಚಲನ್ ಕುಮಾರ್ ಈ ಸಂದರ್ಭ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net