ಸರ್ಕಾರದ ಈ ನಿರ್ಧಾರದ ವಿರುದ್ಧ ಸದನದ ಒಳಗೂ ಮತ್ತು ಹೊರಗೂ ಬಿಜೆಪಿಯಿಂದ ವಿರೋಧ ವ್ಯಕ್ತಪಡಿಸಲಾಗುವುದು ಎಂದ ಅವರು Àಕಸ್ತೂರಿ ರಂಗನ್ ವರದಿಯ 7ನೇ ಅಧಿಸೂಚನೆ ಬಿಡುಗಡೆ ಕುರಿತು ಕಳವಳ ವ್ಯಕ್ತಪಡಿಸಿದರು. ಈ ವರದಿ ಅನುಷ್ಠಾನಕ್ಕೆ ಬಂದರೆ ಕೊಡಗಿನ ಜನರ ಸಾಮಾನ್ಯ ಜೀವನ ಹಾಗೂ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ತೀವ್ರ ತೊಂದರೆಯಾಗಲಿದೆ. ಹೀಗಾಗಿ ವರದಿ ಜಾರಿಯಾಗಬಾರದು ಎಂಬುದು ಬಿಜೆಪಿಯ ಸ್ಪಷ್ಟ ನಿಲುವು. ಈ ವಿಷಯದಲ್ಲಿ ಯಾವುದೇ ರಾಜಕೀಯ ಬೇಡ, ಪಕ್ಷಾತೀತವಾಗಿ ಎಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸಬೇಕಿದೆ. ಗ್ರಾಮ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಜನರ ಧ್ವನಿ ತಲುಪಿಸುವ ಕೆಲಸ ಮಾಡಲಿದ್ದಾರೆ. ಅಧಿವೇಶನ ಮುಗಿದ ತಕ್ಷಣ ಕೊಡಗಿಗೆ ಆಗಮಿಸಿ ಸಭೆ ನಡೆಸುವುದಾಗಿ ಸಂಸದರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.