ಸುಳ್ಯ ಶಾಸಕಿಗೆ ಅಪಮಾನ ಖಂಡಿಸಿ ಬಿಜೆಪಿ ಪ್ರತಿಭಟನೆ

ಬಿಜೆಪಿಯ ಕಾರ್ಯಕರ್ತೆ ಮೇಲಿನ ದೌರ್ಜನ್ಯ ಮತ್ತು ಸುಳ್ಯ ಬಿಜೆಪಿಯ ಮಹಿಳಾ ಶಾಸಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿಯ ಕಾರ್ಯಕರ್ತೆ ಮೇಲಿನ ದೌರ್ಜನ್ಯ ಮತ್ತು ಸುಳ್ಯ ಬಿಜೆಪಿಯ ಮಹಿಳಾ ಶಾಸಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಸುಳ್ಯ ಶಾಸಕಿಗೆ ಅಪಮಾನ ಖಂಡಿಸಿ ಬಿಜೆಪಿ ಪ್ರತಿಭಟನೆ
ಮಡಿಕೇರಿ: ಹುಬ್ಬಳ್ಳಿಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತೆಯನ್ನು ವಿವಸ್ರಗೊಳಿಸಿ ದೌರ್ಜನ್ಯ ಮತ್ತು ಸುಳ್ಯ ಬಿಜೆಪಿಯ ಮಹಿಳಾ ಶಾಸಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಕಿಡಿಗೇಡಿಗಳನ್ನು ಬಂಧನಕ್ಕೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತೆಯನ್ನು ವಿವಸ್ರಗೊಳಿಸಿ ದೌರ್ಜನ್ಯ ನಡೆಸಿದ ಘಟನೆ ನಡೆದಿದೆ. ಅಲ್ಲದೇ, ಸುಳ್ಯ ಬಿಜೆಪಿಯ ಮಹಿಳಾ ಶಾಸಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಶಾಸಕರಿಗೆ ಶ್ರದ್ಧಾಂಜಲಿ ಅರ್ಪಿಸಿ ಕಟುವಾದ ಶಬ್ಧಗಳಿಂದ ನಿಂದಿಸುವ ಮೂಲಕ ವಿಕೃತಿಯನ್ನು ಮರೆದಿರುವ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು. ಕೃತ್ಯವೆಸಗಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.
ಪತ್ರಿಭಟನಾ ನಿರತರು ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ ಸೇರಿದಂತೆ ಜಿಲ್ಲೆ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net