ಕುಶಾಲನಗರ ಪುರಸಭೆ ಅಧಿಕಾರಿಗಳು ಕಾಂಗ್ರೆಸ್ ಪರವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಮುಖಂಡರಾದ ಕೆ.ಜಿ. ಮನು, ಎಂ.ಡಿ. ಕೃಷ್ಣಪ್ಪ, ಚಂದ್ರಶೇಖರ್, ನಾರಾಯಣ, ಶಿವಾಜಿ, ಸುಮನ್, ಗೌತಮ್ ಮತ್ತಿತರರು ಪಾಲ್ಗೊಂಡಿದ್ದರು.
Published on:
Copied
Follow Us
ಕುಶಾಲನಗರ:
ಕುಶಾಲನಗರ ಪುರಸಭೆ ಅಧಿಕಾರಿಗಳು ಕಾಂಗ್ರೆಸ್ ಪರವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಮತ್ತು ಪುರಸಭೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಬಿಜೆಪಿ ವತಿಯಿಂದ ಪುರಸಭೆ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು. ಪುರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಕೆಲ ಅಧಿಕಾರಿಗಳು ಕಾಂಗ್ರೆಸ್ ಏಜೆಂಟರAತೆ ವರ್ತಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಪುರಸಭೆ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಹಾಗೂ ಪುರಸಭೆ ಆಡಳಿತದಲ್ಲಿ ಪಾರದರ್ಶಕತೆ ತರಬೇಕು ಎಂದು ಒತ್ತಾಯಿಸಿದರು. ಪ್ರತಿಭಟನಾಕಾರರು ಪುರಸಭೆ ಅಧಿಕಾರಿಗಳು ಮತ್ತು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಅಲೆಮಾರಿ ಬೆಸ್ತ ಜನಾಂಗದ ಮೀನು ವ್ಯಾಪಾರಿಗಳಿಗೆ ಮೀನು ಮಾರಾಟ ಮಾಡಲು ಪರ್ಯಾಯ ವ್ಯವಸ್ಥೆ ಕಲ್ಪಿಸದೇ ತೆರವುಗೊಳಿಸಿರುವುದನ್ನೂ ಬಿಜೆಪಿ ಮುಖಂಡರು ಖಂಡಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಮುಂದಿನ ದಿನಗಳಲ್ಲಿ ಅಲೆಮಾರಿ ಬೆಸ್ತ ಜನಾಂಗದವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.