ಜಯಂತಿ ಆಚರಣೆಯಿಂದ ಮೌಲ್ಯಗಳ ಮರುಸ್ಥಾಪನೆ ಸಾಧ್ಯ

ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿ ಹಾಗೂ ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಬಿ.ಆರ್.ಲಿಂಗಪ್ಪ, ಬಿ.ಎನ್.ರಮೇಶ್, ಜ್ಯೋತಿ ಅರುಣ್ ಕುಮಾರ್ ಇತರರಿದ್ದರು.
ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿ ಹಾಗೂ ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಬಿ.ಆರ್.ಲಿಂಗಪ್ಪ, ಬಿ.ಎನ್.ರಮೇಶ್, ಜ್ಯೋತಿ ಅರುಣ್ ಕುಮಾರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಯಂತಿ ಆಚರಣೆಯಿಂದ ಮೌಲ್ಯಗಳ ಮರುಸ್ಥಾಪನೆ ಸಾಧ್ಯ

ಮಡಿಕೇರಿ: ಮಹಾನ್ ಚೇತನಗಳ ಜಯಂತಿಯನ್ನು ಆಚರಿಸುವುದರಿಂದ ದೇಶದ ಶ್ರೀಮಂತ ಇತಿಹಾಸ ಸಾಹಿತ್ಯ, ಸಾಂಸ್ಕೃತಿಕ ಪರಂಪರೆ ಹಾಗೂ ಮಾನವೀಯ ಮೌಲ್ಯಗಳನ್ನು ಮರುಸ್ಥಾಪಿಸಲು ಸಾಧ್ಯವಾಗುತ್ತದೆ ಎಂದು ಮಕ್ಕಂದೂರು ಸಾಧ್ಯ ಟ್ರಸ್ಟಿ ಆಫ್ ಸೋಶಿಯಲ್ ಡೆವಲಪ್‌ಮೆಂಟ್ ಟ್ರಸ್ಟಿ ಬಿ.ಎನ್.ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿ ಹಾಗೂ ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಮಾಜದಲ್ಲಿ ಜಾತಿ, ಅಸ್ಪೃಶ್ಯತೆ ಹಾಗೂ ಅಸಮಾನತೆ ತಾಂಡವವಾಡುತ್ತಿದ್ದ ಸಂದರ್ಭದಲ್ಲಿ ಜನರಲ್ಲಿ ಆತ್ಮವಿಶ್ವಾಸ, ಶಿಕ್ಷಣ, ಸಂಘಟನೆ ಮತ್ತು ಸಾಮಾಜಿಕ ಸಮಾನತೆಯ ಅರಿವು ಮೂಡಿಸಿದ ಮಹಾನ್ ಸಮಾಜ ಸುಧಾರಕರಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಪ್ರಮುಖರಾಗಿದ್ದಾರೆ ಎಂದರು.
ನಾರಾಯಣ ಗುರುಗಳ ತತ್ವಚಿಂತನೆಯ ಸಾರವೇ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶ. ಜಾತಿಯ ಹೆಸರಿನಲ್ಲಿ ಮನು?್ಯರನ್ನು ವಿಭಜಿಸದೆ ಮಾನವ ಜಾತಿಯೊಂದೇ ಎಂಬ ಅರಿವು ಮೂಡಿಸಬೇಕು. ವಿವಿಧ ಮತಗಳು ಬೇರೆ ಬೇರೆ ಪಥಗಳಾಗಿದ್ದರೂ ಅಂತಿಮವಾಗಿ ಎಲ್ಲರೂ ಒಂದೇ ಪರಮಾತ್ಮನತ್ತ ಸಾಗುತ್ತಾರೆ ಎಂಬ ಸಮಾನತೆಯ ಸಂದೇಶವನ್ನು ಅವರು ಸಾರಿದರು.
ಜಾತಿ-ಮತಗಳ ಎಲ್ಲೆಗಳನ್ನು ಮೀರಿ ಮಾನವೀಯತೆ ಮತ್ತು ಸಮಾನತೆಯನ್ನು ಬೆಳೆಸುವ ನಾರಾಯಣ ಗುರುಗಳ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬಿ.ಎನ್.ರಮೇಶ್ ಅವರು ಕರೆ ನೀಡಿದರು.
ಸೋಮವಾರಪೇಟೆ ಸೆಂಟ್ ಜೋಸೆಫರ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾದ ಜ್ಯೋತಿ ಅರುಣ್ ಕುಮಾರ್ ಅವರು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಅವರ ಕುರಿತು ಉಪನ್ಯಾಸ ನೀಡಿ, ೧೨ನೇ ಶತಮಾನದಲ್ಲಿ ಬಸವಣ್ಣನವರ ಕಾಯಕ ತತ್ವ ಹಾಗೂ ಸಮಾನತೆಯ ಸಂದೇಶದಿಂದ ಪ್ರೇರಣೆಗೊಂಡು, ದುಡಿಮೆಯನ್ನೇ ಆರಾಧನೆಯನ್ನಾಗಿಸಿಕೊಂಡು ಬದುಕಿದ ಶಿವಶರಣ ನುಲಿಯ ಚಂದಯ್ಯನವರ ಜೀವನ ಇಂದಿನ ಪೀಳಿಗೆಗೆ ಮಾದರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಲ್ಲವ ಸಮಾಜದ ಜಿಲ್ಲಾಧ್ಯಕ್ಷರು ಹಾಗೂ ನಿವೃತ್ತ ಪೊಲೀಸ್ ಉಪ ಅಧೀಕ್ಷ ಬಿ.ಆರ್.ಲಿಂಗಪ್ಪ ಅವರು, ನಾರಾಯಣ ಗುರುಗಳು ನೀಡಿದ ಸಂಘಟಿತರಾಗಿ, ವಿದ್ಯಾವಂತರಾಗಿ ಎಂಬ ಬೋಧನೆಯನ್ನು ಇಂದಿನ ಸಮಾಜ ಸ್ಮರಿಸಬೇಕಾಗಿದೆ. ಶಿಕ್ಷಣ ಹಾಗೂ ಸಂಘಟನೆಗೆ ಆದ್ಯತೆ ನೀಡಿದಾಗ ಮಾತ್ರ ಸಮುದಾಯ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಪ್ರಗತಿ ಸಾಧಿಸಲು ಸಾಧ್ಯ. ಗುರುಗಳು ತೋರಿಸಿಕೊಟ್ಟ ಮಾರ್ಗದಲ್ಲಿ ಸಾಗಲು ಹಾಗೂ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ನಾವು ಇನ್ನ?್ಟು ಪ್ರಯತ್ನಿಸಬೇಕಾಗಿದೆ ಎಂದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಎಚ್.ಎಲ್.ದಿವಾಕರ ಮಾತನಾಡಿ, ಮಹನೀಯರು ಯಾವುದೇ ಒಂದು ಜಾತಿಗೆ ಸೀಮಿತವಾಗಿರದೆ, ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಆದ್ದರಿಂದ ಒಂದು ಸಮುದಾಯದ ಗಣ್ಯ ವ್ಯಕ್ತಿಗಳ ಜಯಂತಿಯನ್ನು ಆಚರಿಸುವಾಗ ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ ಇಡೀ ಸಮಾಜವನ್ನು ಒಗ್ಗೂಡಿಸಬೇಕು. ಆ ಮೂಲಕ ಮಹನೀಯರ ಜಯಂತಿಯ ಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಮತ್ತು ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವಂತಾಗಬೇಕು ಎಂದು ಹೇಳಿದರು.
ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್.ಡಿ.ವಿಜೇತ್ ಮಾತನಾಡಿ, ಮಹನೀಯರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಮಡಿಕೇರಿ ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಸಮಾಜದ ಪ್ರಮುಖರಾದ ಚೆನ್ನಪ್ಪ, ಗಂಗಾಧರ್, ರಂಜನ್, ಪ್ರತೀಪ, ಸುಧೀರ್, ಕುಸುಮಾವತಿ, ಚಂದ್ರಹಾಸ್, ಬ್ಲಾಸಂ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net