ಹೆಣ್ಣುಮಕ್ಕಳು ಸುಶಿಕ್ಷಿತರಾಗಲು ಕರೆ

ಮುಕ್ಕೋಡ್ಲು ಗ್ರಾಮದಲ್ಲಿ ನಡೆದ ಅರಿವು ಕಾರ್ಯಕ್ರಮದ ಸಂದರ್ಭ ಅಂಗನವಾಡಿಗಳಿAದ ಸೂಕ್ತ ಸಮಯದಲ್ಲಿ ಫಲಾನುಭವಿಗಳಿಗೆ ಸರಿಯಾಗಿ ಆಹಾರ ವಿತರಣೆ ಆಗುತ್ತಿರುವ ಬಗ್ಗೆ ಕೂಲಿ ಕಾರ್ಮಿಕರ ವಾಸಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಪ್ರಸನ್ನ ಕುಮಾರ್, ಮೇಪಾಡಂಡ ಸವಿತಾ ಕೀರ್ತನ್ ಮತ್ತಿತರರು ಇದ್ದರು.
ಮುಕ್ಕೋಡ್ಲು ಗ್ರಾಮದಲ್ಲಿ ನಡೆದ ಅರಿವು ಕಾರ್ಯಕ್ರಮದ ಸಂದರ್ಭ ಅಂಗನವಾಡಿಗಳಿAದ ಸೂಕ್ತ ಸಮಯದಲ್ಲಿ ಫಲಾನುಭವಿಗಳಿಗೆ ಸರಿಯಾಗಿ ಆಹಾರ ವಿತರಣೆ ಆಗುತ್ತಿರುವ ಬಗ್ಗೆ ಕೂಲಿ ಕಾರ್ಮಿಕರ ವಾಸಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಪ್ರಸನ್ನ ಕುಮಾರ್, ಮೇಪಾಡಂಡ ಸವಿತಾ ಕೀರ್ತನ್ ಮತ್ತಿತರರು ಇದ್ದರು.
Published on
ಮಡಿಕೇರಿ:
ಪ್ರತಿ ಗ್ರಾಮದಲ್ಲೂ ಹೆಣ್ಣುಮಕ್ಕಳು ಸುಶಿಕ್ಷಿತರಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಸನ್ನ ಕುಮಾರ್ ಹೇಳಿದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮುಕೋಡ್ಲು ಮತ್ತು ಹಮ್ಮಿಯಾಲ ಗ್ರಾಮದಲ್ಲಿ ನಡೆದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿ ಗ್ರಾಮದಲ್ಲೂ ಹೆಣ್ಣುಮಕ್ಕಳ ಸುರಕ್ಷತೆಗೆ ಆದ್ಯತೆ ಕೊಡಬೇಕು. ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸಬೇಕು. ಹೆಣ್ಣು ಮಕ್ಕಳ ಸ್ವಾವಲಂಬಿ ಬದುಕಿಗೆ ಸಹಕರಿಸಲು ಇಲಾಖೆ ಮತ್ತು ಸಮುದಾಯ ಒಂದಾಗಿ ಶ್ರಮಿಸಬೇಕು. ಸಖಿ ಕೇಂದ್ರವು ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಐದು ಸೇವೆಗಳಾದ ವೈದ್ಯಕೀಯ ನೆರವು, ಕಾನೂನು ನೆರವು, ಆಪ್ತ ಸಮಾಲೋಚನೆ, ತಾತ್ಕಾಲಿಕ ಆಶ್ರಯ ಹಾಗೂ ಪೊಲೀಸ್ ನೆರವು ನೀಡುತ್ತದೆ. ಮಕ್ಕಳ ಸಹಾಯವಾಣಿ 1098, ಮಹಿಳಾ ಸಹಾಯವಾಣಿ 181 ರ ಸಹಕಾರದೊಂದಿಗೆ ಇಲಾಖೆಯನ್ನು ಮಹಿಳೆಯರು ಮತ್ತು ಮಕ್ಕಳು ದಿನದ 24 ಗಂಟೆಗಳು ವಾರದ ಏಳು ದಿನಗಳು ಉಚಿತವಾಗಿ ಸಂಪರ್ಕಿಸಬಹುದಾಗಿದೆ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನೀಡುವ ಯೋಜನೆಯಾದ ಉದ್ಯೋಗಿನಿ ಯೋಜನೆಯು ಮಹಿಳೆಯರು ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕ್‌ಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. 18 ರಿಂದ 55 ವರ್ಷದ ಒಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು ಎಂದರು.
ಪ್ರಭಾರ ಸಾಹಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ ಬಿಪಿಎಲ್ ಕುಟುಂಬಕ್ಕೆ ಸೇರಿದ 2 ಹೆಣ್ಣು ಮಕ್ಕಳ ಜನನವಾಗಿ ಎರಡು ವರ್ಷದೊಳಗೆ ಪಕ್ಕದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿದಲ್ಲಿ ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆಯ ಸೌಲಭ್ಯ ಪಡೆಯಬಹುಉ. ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಸರ್ಕಾರಿ ನೌಕರಳಲ್ಲದ ಮೊದಲ ಪ್ರಸವದ ಗರ್ಭಿಣಿಗೆ ಎರಡು ಕಂತುಗಳಲ್ಲಿ 5000 ಸಹಾಯಧನ ಹಾಗೂ ಎರಡನೇ ಪ್ರಸವದ ಬಾಣಂತಿ ಮಹಿಳೆಯರಿಗೆ ಹೆಣ್ಣು ಮಗು ಜನಿಸಿದರೆ ಡಿ ಬಿ ಟಿ ಮೂಲಕ ಒಂದೇ ಕಂತಿನಲ್ಲಿ 6000 ಸಹಾಯಧನ ನೀಡಲಾಗುತ್ತದೆ ಎಂದು ಹೇಳಿದರು. ಅಂಗನವಾಡಿ ಕಾರ್ಯಕರ್ತೆ ಲಲಿತಾ, ತಾರಾಮಣಿ, ಆಶಿತಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net