ನಶೆ ಮುಕ್ತರಾಗುವ ಪ್ರತಿಜ್ಞೆಗಳ ಅಭಿಯಾನ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯ ವಿರಾಜಪೇಟೆ ಶಾಖೆಯ ಆಶ್ರಯದಲ್ಲಿ ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ ನಶೆ ಮುಕ್ತರಾಗುವ ಪ್ರತಿಜ್ಞೆಗಳ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಮತ್ತು ಗಣ್ಯರು. ಕೋಮಲ, ಎಂ.ಪಿ. ದಮಯಂತಿ, ಚಂಗಪ್ಪ, ಅಕ್ಕಮ್ಮ, ಅನುಪಮ ತಿಮ್ಮಯ್ಯ ಮತ್ತಿತರರು ಇದ್ದರು.

Published on
ವಿರಾಜಪೇಟೆ:
ಸ್ಥಳೀಯ ಕಾವೇರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯ ವಿರಾಜಪೇಟೆ ಶಾಖೆಯ ಆಶ್ರಯದಲ್ಲಿ ನಶೆ ಮುಕ್ತರಾಗುವ ಪ್ರತಿಜ್ಞೆಗಳ ಅಭಿಯಾನ ಕಾರ್ಯಕ್ರಮ ಬುಧವಾರ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಸಂಚಾಲಕಿ ಕೋಮಲ, ವಿದ್ಯಾರ್ಥಿಗಳಿಗೆ ನಶೆ ಮುಕ್ತ ಜೀವನದ ಪ್ರಾಮುಖ್ಯತೆಯ ಕುರಿತು ಜಾಗೃತಿ ಮೂಡಿಸಿದರು. ನಾನು ಯಾವುದೇ ರೀತಿಯ ಮಾದಕ ವಸ್ತುಗಳನ್ನು ಸೇವಿಸುವುದಿಲ್ಲ, ನಶೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಆರೋಗ್ಯಕರ ಜೀವನ ನಡೆಸಲು ಶ್ರಮಿಸುತ್ತೇನೆ. ಕುಟುಂಬ, ಸಮಾಜ ಹಾಗೂ ದೇಶದ ಹಿತಕ್ಕಾಗಿ ನಶಾ ಮುಕ್ತ ಸಮಾಜ ನಿರ್ಮಾಣಕ್ಕೆ ನನ್ನ ಸಹಕಾರ ನೀಡುತ್ತೇನೆ ಎಂದು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಮಾತನಾಡಿ, ಯುವಜನತೆ ಮಾದಕ ದ್ರವ್ಯ ಹಾಗೂ ಇತರ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ರೂವಾರಿಗಳಾಗಬೇಕು. ಮನಸ್ಸನ್ನು ಕೇಂದ್ರೀಕರಿಸಲು ಪರಮಾತ್ಮನ ಧ್ಯಾನ ಅಗತ್ಯವಾಗಿದ್ದು, ಆತ್ಮದಲ್ಲಿ ಅಪಾರ ನಂಬಿಕೆ ಇರಿಸಿಕೊಂಡಾಗ ಆತ್ಮವು ಪರಮಾತ್ಮನಲ್ಲಿ ಲೀನವಾಗುತ್ತದೆ ಎಂದರು.
ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ನಕಿಯ ಬಾನು, ಉಪ ಪ್ರಾಂಶುಪಾಲೆ ಎಂ.ಪಿ. ದಮಯಂತಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ಸದಸ್ಯರುಗಳಾದ ಚಂಗಪ್ಪ, ಅಕ್ಕಮ್ಮ, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಅನುಪಮ ತಿಮ್ಮಯ್ಯ, ಉಪನ್ಯಾಸಕ ವೃಂದ, ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net