ಮಂಗಳೂರಿನಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿ ಚಾಮುಂಡೇಶ್ವರಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಮಡಿಕೇರಿಯಿಂದ ಸುಳ್ಯದತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಲಾರಿಯ ಹಿಂಬದಿಯ ಚಕ್ರಕ್ಕೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಬರೆಗೆ ಡಿಕ್ಕಿಯಾಗಿ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಗಾಯಾಳುಗಳನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.