ಸೋಮವಾರ ಸಂಜೆ 5.30 ಘಟನೆ ನಡೆದಿದ್ದು, ಕಾರು ಚಾಲಕನ ಅಜಾಗರೂಕ ಚಾಲನೆಯೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಕಾರಿನ ಬಲಭಾಗದ ಟೈಯರ್ ರಸ್ತೆಯ ಬಲಭಾಗಕ್ಕೆ ಹಾರಿ ಬಿದ್ದಿದೆ. ಬಸ್ ಓವರ್‌ಟೇಕ್ ಮಾಡಲು ಹೋದ ಕಾರು ಚಾಲಕ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ಹಿನ್ನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನ ದಟ್ಟಣೆ ಕಂಡು ಬಂತು.