ಶಾಂತಳ್ಳಿ ವ್ಯಾಪ್ತಿಯ ಜಕ್ಕನಳ್ಳಿ ಗ್ರಾಮದ ಪ್ರವೀಣ್ ಎಂಬುವರು ಶುಕ್ರವಾರ ಸಂಬಂಧಿಕರನ್ನು ಸೋಮವಾರಪೇಟೆ ಬಸ್ ನಿಲ್ದಾಣಕ್ಕೆ ಕರೆತಂದು, ವಾಪಸ್ ಹೋಗುವಾಗ ಈ ಅವಘಡ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ತಮಿಳುನಾಡು ನೋಂದಣಿ ಸಂಖ್ಯೆಯ ಕಾರು ಅಡ್ಡಾದಿಡ್ಡಿ ಬಂದ ಪರಿಣಾಮ ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದಾಗ ಕಾರು ರಸ್ತೆಯ ಬಲ ಬದಿಯಲ್ಲಿ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು, ಕಾರಿನ ಮುಂಭಾಗ ತೀವ್ರ ಜಖಂಗೊಂಡು ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪ್ರವೀಣ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.