ಬೆಂಗಳೂರು ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯ ಪ್ಲೇಸ್‌ಮೆಂಟ್ ಸೆಲ್ ಮತ್ತು ಸಿಎಸ್‌ಆರ್ ರಾಜ್ಯ ನೋಡಲ್ ನಿವೃತ್ತ ಅಧಿಕಾರಿ ಪ್ರೊ.ಎ.ನಾರಾಯಣ ಪ್ರಸಾದ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ನಂತರದ ಉನ್ನತ ಶಿಕ್ಷಣ, ವಿವಿಧ ವೃತ್ತಿ ಅವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಕೌಶಲಾಭಿವೃದ್ಧಿ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು.