ಏರ್ ಮಾರ್ಷಲ್(ನಿವೃತ್ತ) ನಂದ ಕಾರ್ಯಪ್ಪ, ಮಾಜಿ ಸಚಿವ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂಧುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ತಹಶೀಲ್ದಾರ್ ಶ್ರೀಧರ, ಡಿವೈಎಸ್‌ಪಿಗಳಾದ ಸೂರಜ್, ಮೇದಪ್ಪ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಎಂ.ಪಿ.ಮುತ್ತಪ್ಪ, ಓಂಕಾರೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜೀರ ಅಯ್ಯಪ್ಪ, ಮಾಜಿ ಸೈನಿಕರು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಅಭಿಮಾನಿಗಳು ಇತರರು ಹೂಗುಚ್ಛ ಇಟ್ಟು ಪುಷ್ಪಾರ್ಚನೆ ನೆರವೇರಿಸಿ, ಗೌರವ ನಮನ ಸಲ್ಲಿಸಿದರು.