ಪ್ರಾಂಶುಪಾಲ ಡಾ. ಎಂ. ಬಿ. ಕಾವೇರಿಯಪ್ಪ ಮಾತನಾಡಿ ಕಾಲೇಜಿನಲ್ಲಿ ಶಿಕ್ಷಣದ ಜತೆಗೆ ಕ್ರೀಡೆ, ಎನ್.ಸಿ.ಸಿ., ಎನ್.ಎಸ್.ಎಸ್., ರೋವರ್ಸ್ ರೆಂಜರ್ಸ್ನಲ್ಲಿಯೂ ವಿದ್ಯಾರ್ಥಿಗಳ ಬೆಳವಣಿಗೆಗೆ ಅವಕಾಶ ಮಾಡಿಕೊಟ್ಟಿದ್ದು, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಅಂತಿಮ ವರ್ಷದ ಪದವಿ ಓದುವ ಸಮಯದಲ್ಲಿಯೇ ಪ್ರತಿವರ್ಷ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಲೇಜಿನಲ್ಲಿ ನಡೆಸುವ ಕ್ಯಾಂಪಸ್ ಸೆಲೆಕ್ಷನ್‌ನಲ್ಲಿ ವಿವಿಧ ಕಂಪೆನಿಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜು ಬಸ್ ವ್ಯವಸ್ಥೆಯನ್ನು ಮಾಡಲಾಗಿದ್ದು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.