ಸೌಹಾರ್ದ ಸಹಕಾರಿ ಶತಸಂಭ್ರಮದ ಕಾರ್ಯಕ್ರಮ ಜ.೧೧ ರಂದು ನಗರದ ಗೌಡ ಸಮಾಜದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಡಿ.೨೫ ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲೆಯ ಶಿಕ್ಷಕರಿಗೆ, ಸಂಘದ ಸದಸ್ಯರಿಗೆ ಹಾಗೂ ಕೊಡಗು ಜಿಲ್ಲಾ ಶಿಕ್ಷಣ ಇಲಾಖಾ ನೌಕರರಿಗೆ ಕ್ರೀಡಾಕೂಟ ನಡೆಯಲಿದೆ. ಪುರುಷರಿಗೆ ವಾಲಿಬಾಲ್, ಹಗ್ಗ ಜಗ್ಗಾಟ, ಕಬ್ಬಡ್ಡಿ, ಮಹಿಳೆಯರಿಗೆ ಹಗ್ಗ ಜಗ್ಗಾಟ ಮತ್ತು ಥ್ರೋಬಾಲ್. ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ೧೦೦ ಮೀಟರ್ ಓಟದ ಸ್ಪರ್ಧೆ, ನಡೆಯುವ ಸ್ಪರ್ಧೆ, ಮೂಸಿಕಲ್ ಚೇರ್, ಭಾರತದ ಗುಂಡು ಎಸೆತ ಮತ್ತು ವಿಷದ ಚೆಂಡು ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.