ಶತಮಾನೋತ್ಸವದ ಅಂಗವಾಗಿ ವಿವಿಧ ಯಂತ್ರೋಪಕರಣಗಳನ್ನು ಪ್ರದರ್ಶನ ಮಾಡಲಾಗುವುದು. ಮೂರು ದಿನಗಳ ಕಾಲ ೧೦ಕ್ಕೂ ಅಧಿಕ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಹಲವಾರು ವಿಜ್ಞಾನಿಗಳು, ನುರಿತ ಬೆಳೆಗಾರರು, ಸಂಶೋಧಕರು ಆಗಮಿಸಿ ಬೆಳೆಗಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಸಮಾರಂಭದಲ್ಲಿ ಕೇಂದ್ರದ ವಾಣಿಜ್ಯ ಸಚಿವ ಪಿಯೂಶ್ ಗೋಯಲ್, ಪ್ರಲ್ಹಾದ್ ಜೋಷಿ, ರಾಜ್ಯದ ವಿವಿಧ ಸಚಿವರು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.