ಜ.೧೫ರಂದು ಭಾಗಮಂಡಲದಲ್ಲಿ ಚಂಡಿಕಾ ಹೋಮ

ಸುದ್ದಿಗೋಷ್ಠಿಯಲ್ಲಿ ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್‌ನ  ಅಧ್ಯಕ್ಷ ಎಂ.ಬಿ.ದೇವಯ್ಯ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎಂ.ಬಿ.ದೇವಯ್ಯ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಜ.೧೫ರಂದು ಭಾಗಮಂಡಲದಲ್ಲಿ ಚಂಡಿಕಾ ಹೋಮ
ಮಡಿಕೇರಿ: ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ.೧೫ರಂದು ಭಾಗಮಂಡಲದಲ್ಲಿ ಚಂಡಿಕಾ ಹೋಮ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಮುದ್ದಂಡ.ಬಿ.ದೇವಯ್ಯ ತಿಳಿಸಿದ್ದಾರೆ.
ಕೊಡವ ಜನಾಂಗದ ಏಳಿಗೆ ಹಾಗೂ ಲೋಕಕಲ್ಯಾಣಕ್ಕಾಗಿ ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್‌ನ ಜಾಗದಲ್ಲಿ ಚಂಡಿಕಾ ಹೋಮ ನಡೆಯಲಿದೆ. ಅಂದು ಬೆಳಗ್ಗೆ ೭ ಗಂಟೆಯಿಂದ ಪೂಜಾ ಕೈಂಕರ್ಯ ಆರಂಭವಾಗಲಿದ್ದು, ಅಂದು ಗಣಪತಿ ಹೋಮ, ಸತ್ಯನಾರಾಯಣ ಸ್ವಾಮಿ ಪೂಜೆ, ಚಂಡಿಕಾ ಹೋಮ ಹಾಗೂ ಶಥರುದ್ರಾಭಿಷೇಕ ಪಠಣ ನಡೆಯಲಿದೆ. ಅಂದಿನ ಧಾರ್ಮಿಕ ಪೂಜಾ ವಿಧಿವಿಧಾನಗಳಲ್ಲಿ ಕೊಡವ ಮತ್ತು ಅಮ್ಮಕೊಡವ ಸಮಾಜಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್‌ನ ಉಪಾಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್, ಟ್ರಸ್ಟಿಗಳಾದ ಪ್ರಭು, ಮನು ಮುದ್ದಪ್ಪ, ಸೋಮಯ್ಯ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net