ಜಿಲ್ಲಾಡಳಿತದಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ

ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಲೋಕೇಶ್ , ಚೀನಾ ಸೋಮೇಶ್, ಎಸ್.ಆರ್.ಅರುಣ್ ರಾವ್, ಕುಮಾರ ಇತರರಿದ್ದರು.
ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಲೋಕೇಶ್ , ಚೀನಾ ಸೋಮೇಶ್, ಎಸ್.ಆರ್.ಅರುಣ್ ರಾವ್, ಕುಮಾರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಡಳಿತದಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ
ಮಡಿಕೇರಿ: ಛತ್ರಪತಿ ಶಿವಾಜಿ ಮಹಾರಾಜರು ಭರತಖಂಡದಲ್ಲಿ ಜನಿಸದಿದ್ದರೆ ಊಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಆ ನಿಟ್ಟಿನಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಿವಾಜಿ ಮಹಾರಾಜರ ತಾಯಿ ಜೀಜಾಬಾಯಿಯವರಿಂದ ಮಕ್ಕಳನ್ನು ಹೇಗೆ ಬೆಳೆಸಬೇಕು ಎಂಬುದನ್ನು ಸಮಾಜಕ್ಕೆ ಹೇಳಿಕೊಟ್ಟಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿ ಹುಟ್ಟಿ ಬೆಳೆದು ಭರತಖಂಡದ ಸಾಮ್ರಾಜ್ಯವನ್ನು ಕಟ್ಟಿದ್ದಾರೆ ಎಂದು ಹೇಳಿದರು.
ಶಿವಾಜಿ ಮಹಾರಾಜರು ಎಲ್ಲರನ್ನು ಪ್ರೀತಿಸುತ್ತಿದ್ದರು. ಗೌರವಿಸುತ್ತಿದ್ದರು ಎಂದು ಹೇಳಿದರು. ಶಿವಾಜಿ ಅವರ ತಾಯಿ ಜಿಜಾಬಾಯಿ ಅವರು ಮಕ್ಕಳಿಗೆ ನೈತಿಕ ಶಿಕ್ಷಣ ನೀಡಬೇಕು ಎಂಬುದು ಅಶಯವಾಗಿತ್ತು ಎಂದು ಹೇಳಿದರು.
ಸಂತ ಚೀನಾ ಸೋಮೇಶ್ ಮಾತನಾಡಿ, ಶಿವಾಜಿ ಅವರು ಭರತ ಭೂಮಿಯಲ್ಲಿ ಜನಿಸಿ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದರು. ಛತ್ರಪತಿ ಶಿವಾಜಿ ಮಹಾರಾಜರು ಭರತ ಖಂಡದ ಅನರ್ಘ್ಯ ರತ್ನ ಎಂದು ವರ್ಣಿಸಿದರು.
ಮರಾಠ ಸಮಾಜದ ಜಿಲ್ಲಾಧ್ಯಕ್ಷ ಎಸ್.ಆರ್.ಅರುಣ್ ರಾವ್ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರು ಸಮಾಜಕ್ಕೆ ನೀಡಿರುವ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು. ಛತ್ರಪತಿ ಶಿವಾಜಿ ಮಹಾರಾಜರು ಮಹಿಳೆಯರಿಗೆ ಸಮಾನ ಅವಕಾಶ ಮತ್ತು ರಕ್ಷಣೆಗೆ ಒತ್ತು ನೀಡಿದ್ದರು. ಶಿವಾಜಿ ಮಹಾರಾಜರು ಭರತ ಸಾಮ್ರಾಜ್ಯದ ದೊರೆಯಾಗಿದ್ದಾರೆ ಎಂದು ಹೇಳಿದರು.
ತಹಶೀಲ್ದಾರ ಶ್ರೀಧರ್ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಪ್ರಮುಖರಾದ ಸುನಿಲ್ ರಾವ್, ನೇಕಾರರ ಒಕ್ಕೂಟದ ಕಾರ್ಯದರ್ಶಿ ಕೆ.ಕೆ.ನಾಗರಾಜ ಶೆಟ್ಟಿ, ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಮಹಾದೇವಿ, ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net