ವಿವಿಧ ವೇಷ ಧರಿಸಿ ರಂಜಿಸಿದ ಪುಟಾಣಿಗಳು

ಮಡಿಕೇರಿ ಸಮೀಪದ ಬೋಟ್ಲಪ್ಪ ಪೈಸಾರಿ ಅಂಗನವಾಡಿ ಕೇಂದ್ರದಲ್ಲಿ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಮತ್ತು ಬಾಲ ಮೇಳ ಕಾರ್ಯಕ್ರಮದಲ್ಲಿ ವಿವಿಧ ವೇಷ ಧಿರಿಸದ್ದ ಚಿಣ್ಣರು ಗಮನ ಸೆಳೆದರು. ಪ್ರಸನ್ನ ಕುಮಾರ್, ಮೇಪಾಡಂಡ ಸವಿತಾ ಕೀರ್ತನ್, ಎಸ್.ಆರ್. ಕೇಶಿನಿ ಮತ್ತಿತರರು ಇದ್ದರು.
ಮಡಿಕೇರಿ ಸಮೀಪದ ಬೋಟ್ಲಪ್ಪ ಪೈಸಾರಿ ಅಂಗನವಾಡಿ ಕೇಂದ್ರದಲ್ಲಿ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಮತ್ತು ಬಾಲ ಮೇಳ ಕಾರ್ಯಕ್ರಮದಲ್ಲಿ ವಿವಿಧ ವೇಷ ಧಿರಿಸದ್ದ ಚಿಣ್ಣರು ಗಮನ ಸೆಳೆದರು. ಪ್ರಸನ್ನ ಕುಮಾರ್, ಮೇಪಾಡಂಡ ಸವಿತಾ ಕೀರ್ತನ್, ಎಸ್.ಆರ್. ಕೇಶಿನಿ ಮತ್ತಿತರರು ಇದ್ದರು.
Published on
ಮಡಿಕೇರಿ:
ಮಡಿಕೇರಿ ಸಮೀಪದ ಬೋಟ್ಲಪ್ಪ ಪೈಸಾರಿ ಅಂಗನವಾಡಿ ಕೇಂದ್ರದಲ್ಲಿ ಬೋಟ್ಲಪ್ಪ ಯುವ ಸಂಘ, ಬೋಟ್ಲಪ್ಪ ಶ್ರೀ ಶಕ್ತಿ ಸಂಘದ ಸಹಕಾರದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಮತ್ತು ಬಾಲ ಮೇಳ ಕಾರ್ಯಕ್ರಮ ಈಚೆಗೆ ನೆರವೇರಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಸನ್ನ ಕುಮಾರ್ ಈ ಸಂದರ್ಭ ಮಾತನಾಡಿ ಬೇಟಿ ಬಚಾವೋ ಬೇಟಿ ಪಡಾವೊ ಯೋಜನೆಯಡಿಯಲ್ಲಿ ಲಿಂಗ ಪಕ್ಷಪಾತ ಮತ್ತು ಲಿಂಗ ಆಯ್ಕೆ ಮಾಡುವುದನ್ನು ತಡೆಗಟ್ಟುವುದು, ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸಬೇಕು, ಹೆಣ್ಣು ಮಕ್ಕಳನ್ನು ರಕ್ಷಿಸಿ ಸಮಾಜದಲ್ಲಿ ಉತ್ತಮ ಶಿಕ್ಷಣವಂತರನ್ನಾಗಿ ಮಾಡಬೇಕು, ಲಿಂಗ ಪತ್ತೆ ಮಾಡುವುದು ಕಂಡು ಬಂದಲ್ಲಿ ಕೂಡಲೇ ವರದಿ ಮಾಡಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಮಾತೃವಂದನಾ ಯೋಜನೆ, ಸುಕನ್ಯಾ ಸಮೃದ್ಧಿ, ಭಾಗ್ಯಲಕ್ಷ್ಮಿ ಯೋಜನೆ, ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಖೀ ಒನ್ ಸ್ಟಾಪ್ ಸೆಂಟರ್, ಮಹಿಳಾ ಸಹಾಯವಾಣಿ 181, ಮಕ್ಕಳ ಸಹಾಯವಾಣಿ 1098, ತುರ್ತು ಸೇವೆ 112 ಬಗ್ಗೆ ಮಾಹಿತಿ ನೀಡಿದರು. ಅರ್ಥಿಕ ಅಭಿವೃದ್ಧಿಗಾಗಿ ಮಹಿಳೆಯರಿಗೆ ಉದ್ಯೋಗಿನಿ ಸೌಲಭ್ಯಕ್ಕೆ ಅರ್ಜಿ ಹಾಕಲು ತಿಳಿಸಿದರು.
ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಿಗುವ ಪ್ರಶಸ್ತಿಗಳು, ಸ್ಪರ್ಧಾ ಕಾರ್ಯಕ್ರಮಗಳು ಹಾಗೂ ಹೆಣ್ಣು ಮಕ್ಕಳು ಆರ್ಥಿಕವಾಗಿ ಸದೃಢರಾಗುವ ಬಗ್ಗೆ ಮಾಹಿತಿ ನಿಡಿದರು. ಸ್ತಿçà ಶಕ್ತಿ ಸಂಘದವರು ಆದಾಯೋತ್ಪನ್ನ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಛದ್ಮವೇಷ ಮತ್ತು ವಿವಿಧ ಆಟೋಟ ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಸಂಯೋಜಕಿ ಮಮತಾ, ಜೆಂಡರ್ ಸ್ಪೆಷಲಿಸ್ಟ್ ಎಸ್.ಆರ್. ಕೇಶಿನಿ ಮತ್ತಿತರರು ಇದ್ದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಕಡಗದಾಳು ಅಂಗನವಾಡಿ ಕಾರ್ಯಕರ್ತೆ ಕೆ.ಆರ್. ಅನಿಲಾ ಅÀವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿ ಗೌರವಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net