ಮಕ್ಕಳಿಗೆ ಕಂಪ್ಯೂಟರ್ ಜ್ಞಾನ ಅವಶ್ಯ

ಕುಶಾಲನಗರ ಸಮೀಪದ ಗುಡ್ಡೆಹೊಸೂರು ವ್ಯಾಪ್ತಿಯ ಬೊಳ್ಳೂರಿನ ಐಶ್ವರ್ಯ ಪಬ್ಲಿಕ್ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ನೃತ್ಯ ಕಲಾಂಜಲಿ ಮತ್ತು ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಎನ್.ಕೆ.ಜ್ಯೋತಿ ಉದ್ಘಾಟಿಸಿದರು. ಪುಲಿಯಂಡ ಸುಬ್ಬಯ್ಯ, ಜಯಂತಿ ಸುಬ್ಬಯ್ಯ, ಕಾವೇರಮ್ಮ ಪುಲಿಯಂಡರಾಮು, ಮದನ್ ಇತರರು ಇದ್ದರು.
ಕುಶಾಲನಗರ ಸಮೀಪದ ಗುಡ್ಡೆಹೊಸೂರು ವ್ಯಾಪ್ತಿಯ ಬೊಳ್ಳೂರಿನ ಐಶ್ವರ್ಯ ಪಬ್ಲಿಕ್ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ನೃತ್ಯ ಕಲಾಂಜಲಿ ಮತ್ತು ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಎನ್.ಕೆ.ಜ್ಯೋತಿ ಉದ್ಘಾಟಿಸಿದರು. ಪುಲಿಯಂಡ ಸುಬ್ಬಯ್ಯ, ಜಯಂತಿ ಸುಬ್ಬಯ್ಯ, ಕಾವೇರಮ್ಮ ಪುಲಿಯಂಡರಾಮು, ಮದನ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕೊಡಗು ಜಿಲ್ಲಾ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಎನ್.ಕೆ.ಜ್ಯೋತಿ ಅಭಿಪ್ರಾಯ
  • ನೃತ್ಯ ಕಲಾಂಜಲಿ, ಕಾಲೇಜು ವಾರ್ಷಿಕೋತ್ಸವ
ಕುಶಾಲನಗರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಕಂಪ್ಯೂಟರ್ ಜ್ಞಾನ ಬೆಳೆಸುವ ಮೂಲಕ ಅವರಿಗೆ ಉತ್ತಮ ಭವಿಷ್ಯ ರೂಪಿಸುವಲ್ಲಿ ಪಾಲಕರು ಹಾಗೂ ಶಿಕ್ಷಕರು ಶ್ರಮಿಸಬೇಕು ಎಂದು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಹಾಗೂ ಕೊಡಗು ಜಿಲ್ಲಾ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಎನ್.ಕೆ.ಜ್ಯೋತಿ ಸಲಹೆ ನೀಡಿದರು.
ಕುಶಾಲನಗರ ಸಮೀಪದ ಗುಡ್ಡೆಹೊಸೂರು ವ್ಯಾಪ್ತಿಯ ಬೊಳ್ಳೂರಿನ ಐಶ್ವರ್ಯ ಪಬ್ಲಿಕ್ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ನೃತ್ಯ ಕಲಾಂಜಲಿ ಮತ್ತು ಕಾಲೇಜು ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದಲ್ಲಿ ಬಹು ಪ್ರಮುಖ ಘಟ್ಟವಾದ್ದರಿಂದ ಮಕ್ಕಳು ನಿರಂತರ ಅಧ್ಯಯನಶೀಲತೆ ಮೈಗೂಡಿಸಿಕೊಂಡು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಬೇಕು ಎಂದರು.
ಮುಖ್ಯ ಅತಿಥಿಯಾಗಿದ್ದ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಹಂಡ್ರಂಗಿ ನಾಗರಾಜು ಮಾತನಾಡಿ, ಐಶ್ವರ್ಯ ವಿದ್ಯಾಸಂಸ್ಥೆ ಮಕ್ಕಳಿಗೆ ಉತ್ತಮ ಗುಣಾತ್ಮಕ ಶಿಕ್ಷಣದೊಂದಿಗೆ ಅವರಿಗೆ ಕೌಶಲಗಳನ್ನು ಕಲಿಸುತ್ತಿದ್ದು, ಪ್ರತಿವರ್ಷ ಪಿ.ಯು. ಪರೀಕ್ಷೆಯಲ್ಲಿ 100ರಷ್ಟು ಫಲಿತಾಂಶ ತರುವ ಮೂಲಕ ಉತ್ತಮ ಸಾಧನೆ ತೋರುತ್ತಿದೆ ಎಂದು ಹೇಳಿದರು.
ಐಶ್ವರ್ಯ ವಿದ್ಯಾಸಂಸ್ಥೆ ಪ್ರಮುಖರಾದ ಪುಲಿಯಂಡ ಸುಬ್ಬಯ್ಯ, ಜಯಂತಿ ಸುಬ್ಬಯ್ಯ, ಕಾವೇರಮ್ಮ ಪುಲಿಯಂಡರಾಮು, ಕಾಲೇಜಿನ ಉಪ ಪ್ರಾಂಶುಪಾಲ ಮದನ್,ವಿದ್ಯಾಸಂಸ್ಥೆಯ ಸ್ಥಾಪಕ ಅಧ್ಯಕ್ಷ ಪುಲಿಯಂಡ ರಾಮ್ ದೇವಯ್ಯ, ಐಶ್ವರ್ಯ ಪಿ.ಯು. ಕಾಲೇಜು ಪ್ರಾಂಶುಪಾಲ ಅಮ್ಮತಾಂಡ ಜೋಯಪ್ಪ, ಹಂಡ್ರಂಗಿ ನಾಗರಾಜು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net