ಬಡತನ, ಅಜ್ಞಾನ, ನಿರುದ್ಯೋಗ ಮತ್ತು ಸಾಮಾಜಿಕ ಸಮಸ್ಯೆಗಳ ಕಾರಣದಿಂದ ಅನೇಕ ಮಕ್ಕಳು ಕಾರ್ಖಾನೆ, ಹೋಟೆಲ್, ಅಂಗಡಿಗಳಲ್ಲಿ ಕೆಲಸದಲ್ಲಿ ತೊಡಗಿಸಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಇದನ್ನು ತಪ್ಪಿಸಿ 14 ವರ್ಷದೊಳಗಿನ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಮಕ್ಕಳು ರಾಷ್ಟçದ ಅಮೂಲ್ಯ ಆಸ್ತಿ ಹಾಗೂ ಭವಿಷ್ಯದ ನಿರ್ಮಾತೃಗಳಾಗಿದ್ದು, ಶಾಲೆಯಲ್ಲಿ ಕಲಿಯಬೇಕಾದ, ಆಟವಾಡಬೇಕಾದ ಮತ್ತು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕಾದ ವಯಸ್ಸಿನಲ್ಲಿ ದುಡಿಮೆಗೆ ತಳ್ಳಲ್ಪಡುವುದು ಅತ್ಯಂತ ವಿಷಾದನೀಯ. ಬಡತನ, ಅನಕ್ಷರತೆ, ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಗಳು ಬಾಲ ಕಾರ್ಮಿಕ ಪದ್ಧತಿಗೆ ಪ್ರಮುಖ ಕಾರಣವಾಗಿದೆ. ಆದರೆ ಈ ನೆಪದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದನ್ನು ತಪ್ಪಿಸಬಾರದು.