ಪೆರಾಜೆ ಕುಂದಲ್ಪಾಡಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಎಸ್‌ಡಿಎಂಸಿ ಅಧ್ಯಕ್ಷ ಸಿ .ಎಸ್. ಯತೀಶ್ ಉದ್ಘಾಟಿಸಿದರು. ಎನ್.ಎಸ್. ಕುಮಾರ್ ಇತರರಿದ್ದರು.
ನಾಪೋಕ್ಲು: ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನವನ್ನು ಬೆಳೆಸಲು ಮಕ್ಕಳ ಸಂತೆ ಸಹಕಾರಿ ಎಂದು ಎಸ್‌ಡಿಎಂಸಿ ಅಧ್ಯಕ್ಷ ಸಿ .ಎಸ್. ಯತೀಶ್ ಹೇಳಿದರು.
ಪೆರಾಜೆ ಕುಂದಲ್ಪಾಡಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಾಲಾ ಕಲಿಕಾ ಅವಧಿಯಲ್ಲಿ ಪಠ್ಯ ವಿಷಯಗಳ ಜೊತೆ ಸಹಪಠ್ಯ ವಿಷಯಗಳನ್ನು ವಿದ್ಯಾರ್ಥಿಗಳು ಕಲಿಯಬೇಕು ಕ್ರೀಡೆ ಶಿಸ್ತು ವ್ಯವಹಾರ ಕೌಶಲ್ಯ ಭಾಷೆ ಬೆಳವಣಿಗೆ ಇತ್ಯಾದಿಗಳನ್ನು ವೃದ್ಧಿಸಿಕೊಳ್ಳಬೇಕು ಎಂದರು.
ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ತಾವು ತಂದ ಸರಕುಗಳನ್ನು ಮಾರಾಟ ಮಾಡಿದರು .ಶಾಲೆಯಲ್ಲಿ ಸಂತೆಯ ವಾತಾವರಣ ನಿರ್ಮಾಣವಾಗಿತ್ತು. ಶಾಲಾ ಮುಖ್ಯ ಶಿಕ್ಷಕ ಕುಮಾರ್ ಎನ್.ಎಸ್, ಎಸ್‌ಡಿಎಂಸಿ ಸದಸ್ಯರು, ಪಾಲಕರು ಇದ್ದರು.