ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಹಲವು ಸಾಹಿತ್ಯ, ಸಂಸ್ಕೃತಿ ಚಟುವಟಿಕೆ ಕೈಗೊಳ್ಳಲಾಗಿದೆ. ಅಕಾಡೆಮಿ ವತಿಯಿಂದ ನೂರಕ್ಕೂ ಹೆಚ್ಚು ಪುಸ್ತಕಗಳು, ೧೧ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಲಾಗಿದೆ. ಕಥೆ, ಕವನ, ನಾಟಕ, ಮತ್ತಿತರ ಪುಸ್ತಕಗಳನ್ನು ಹೊರತರಲಾಗಿದೆ ಎಂದರು.